ಗಣರಾಜ್ಯೋತ್ಸವ ಕಾರ್ಯಕ್ರಮ

ಹುಬ್ಬಳ್ಳಿ,ಜ27 : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ಹಾಗೂ ಹುಬ್ಬಳ್ಳಿ – ಧಾರವಾಡ ನಗರ ಸಾರಿಗೆ ವಿಭಾಗಗಳ ವಿಭಾಗೀಯ ಕಚೇರಿಗಳಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಎರಡೂ ವಿಭಾಗಗಳ ವಿಭಾಗೀಯ ನಿಯಂತ್ರಣಾ ಧಿಕಾರಿ ಹೆಚ್. ರಾಮನಗೌಡರ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ನೆರವೇರಿಸಿ ಪುಷ್ಪ ನಮನ ಸಲ್ಲಿಸಿ, ಧ್ವಜಾರೋಹಣ ಮಾಡಿದರು.
ನಂತರ ಮಾತನಾಡಿದ ಅವರು ತಮ್ಮ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ತಂದು ಕೊಟ್ಟಂತಹ ಹಾಗೂ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿದ ಮಹನೀಯರುಗಳ ಕೊಡುಗೆಯನ್ನು ಸ್ಮರಿಸಿದರು. ಸಂವಿಧಾನದಲ್ಲಿ ನಿಗದಿಪಡಿಸಿದಂತೆ ನಮ್ಮ ಕರ್ತವ್ಯಗಳನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸಿದಾಗ ಮಾತ್ರ ಗಣರಾಜ್ಯೋತ್ಸವದ ಆಚರಣೆಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸಿಬ್ಬಂದಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪೂಜೆ,ಪುಷ್ಪ ನಮನ ಸಲ್ಲಿಸಲಾಯಿತು.
ಹುಬ್ಬಳ್ಳಿ ಗ್ರಾಮಾಂತರ ವಿಭಾಗ ಹಾಗೂ ಹುಬ್ಬಳ್ಳಿ – ಧಾರವಾಡ ನಗರ ಸಾರಿಗೆ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.