ಗಣಿ, ಭೂ ಇಲಾಖೆಗೆ ಮೂರನೇ ಸ್ಥಾನ: ಎಸ್ಸೆಸ್ಸೆಂ

ಛತ್ತೀಸ್‌ಘಡ, ಜ. ೨೪- ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸಾಧನೆ ಮಾಡುವುದಾಗಿ ಗಣಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.
ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು. ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ೨೦೨೨-೨೩ ನೇ ಸಾಲಿನ ಖನಿಜ ಬ್ಲಾಕಗಳ ಹರಾಜಿನಲ್ಲಿ ೩ ನೇ ಬಹುಮಾನ ಪಡೆದುಕೊಂಡು ಉತ್ತಮ ಸಾಧನೆಯನ್ನು ಮಾಡಿದೆ. ಕೇಂದ್ರ ಸರ್ಕಾರದಿಂದ ಶ್ಲಾಘನೆ ದೊರೆತಿದೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸಾಧನೆ ಮಾಡಿ ತೋರಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದೀಯ ವ್ಯವಹಾರಗಳ ಗಣಿ ಮತ್ತು ಕಲ್ಲಿದ್ದಲು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಮೋಹನ್ ಯಾದವ್ ಜಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೇಂದ್ರದ ಹಿರಿಯ ಅಧಿಕಾರಿಗಳು ಹಾಗೂ ಮಧ್ಯಪ್ರದೇಶದ ಹಿರಿಯ ಅಧಿಕಾರಿಗಳು ಮತ್ತು ನಿರ್ದೇಶಕ ಗಿರೀಶ್ ಉಪಸ್ಥಿತರಿದ್ದರು.