ಗಣೇಶ ಉತ್ಸವಕ್ಕೆ ರಕ್ತದಾನ ಶಿಬಿರ

ಕೆಂಗೇರಿ.ಸೆ೨೧ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ಬಸವರಾಜ್ ಪಡುಕೋಟಿ ರವರು ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ ಕನ್ನಡ ನಾಡು ನುಡಿ ಜಲದ ಬಗ್ಗೆ ಅಭಿಮಾನವನ್ನು ಇಟ್ಟುಕೊಂಡು ಅದರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಡಿಎಸ್ ಮ್ಯಾಕ್ಸ್ ಪ್ರಾಪರ್ಟೀಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ಎಸ್. ಪಿ. ದಯಾನಂದ್ ತಿಳಿಸಿದರು.
ನಮ್ಮ ಕರ್ನಾಟಕ ಸೇನೆ” ರಾಜ್ಯಾಧ್ಯಕ್ಷ ಎಂ.ಬಸವರಾಜ್ ಪಡುಕೋಟಿ ರವರ ನೇತೃತ್ವದಲ್ಲಿ ೨೬ನೇ ವರ್ಷದ ಗಣೇಶ ಉತ್ಸವದ ಅಂಗವಾಗಿ ರಕ್ತದಾನ ಶಿಬಿರವನ್ನು ಶಿವಾಜಿನಗರ ಬಸ್ ನಿಲ್ದಾಣ ಹತ್ತಿರ ಹಮ್ಮಿಕೊಂಡಿದ್ದರು.
ಬಸವರಾಜ್ ಪಡುಕೋಟಿ ಮಾತನಾಡಿ ಈ ಭಾಗದಲ್ಲಿ ಹಿಂದೂ ಮುಸ್ಲಿಂ ಕ್ರೈಸ್ತ ಎನ್ನುವ ಜಾತಿ ಧರ್ಮದ ಬೇದ ಭಾವ ಇಲ್ಲದೆ ಎಲ್ಲಾರು ಸೇರಿ ಸಹೋದರ ಭಾವನೆಯಿಂದ ಎಲ್ಲಾ ಹಬ್ಬಗಳನ್ನು ಆಚರಿಸುತ್ತೇವೆ.ಬಂಧು ಬಾಂಧವರನ್ನು ಭಾವೈಕ್ಯತೆಯನ್ನು ಗಟ್ಟಿಗೊಳಿಸುವುದು ಈ ಹಬ್ಬದ ವಿಶೇಷ. ತವರು ಮನೆಗೆ ಬಂದ ಹೆಣ್ಣು ಮಕ್ಕಳು ಉಡುಗೊರೆಯನ್ನು ಪಡೆದುಕೊಳ್ಳುವುದು. ಹೆತ್ತವರು ಒಡ ಹುಟ್ಟಿದವರು ಚೆನ್ನಾಗಿರಲಿ ಎಂದು ಹಾರೈಸುವುದು ಗೌರಿ ಹಬ್ಬದ ಮಹತ್ವವಾಗಿದೆ.
ರಕ್ತದಾನವು ಉದಾತ್ತ ಮತ್ತು ನಿಸ್ವಾರ್ಥ ಸೇವೆಯಾಗಿದ್ದು, ಇದು ಲಕ್ಷಾಂತರ ಜೀವಗಳನ್ನು ಉಳಿಸಲು ನೆರವಾಗುತ್ತದೆ. ರಕ್ತದಾನ ಮಾಡುವುದರಿಂದ ಇನ್ನೊಂದು ಜೀವಕ್ಕೆ ಜೀವದಾನ ಮಾಡುವ ಜೊತೆಗೆ ರಕ್ತದಾನಿಗೂ ಹಲವು ರೀತಿಯ ಪ್ರಯೋಜನಗಳಿವೆ. ಸಮಯಕ್ಕೆ ಸರಿಯಾಗಿ ರಕ್ತ ಸಿಕ್ಕರೆ ಆದಷ್ಟು ಜನರ ಪ್ರಾಣ ಉಳಿಸಬಹುದು ಎಂಬ ವೈದ್ಯರುಗಳ ಮಾತನ್ನು ಕೇಳಿದಾಗ ನಿಜಕ್ಕೂ ರಕ್ತದಾನದ ಮಹತ್ವ ಅರಿವಾಗುತ್ತದೆ. ಈ ಶಿಬಿರದಲ್ಲಿ ೩೦೦ಕ್ಕೂ ಹೆಚ್ಚು ರಕ್ತದಾನ ಮಾಡಿದ್ದಾರೆ ಎಂದು ತಿಳಿಸಿದರು ಪೂಜಾ ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಶಕೀಲ್ ಅಹಮ್ಮದ್, ಸಮಾಜಸೇವಕ ಕೆ.ಜೆ. ಹನುಮಂತಯ್ಯ,ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು, ಮತ್ತು ಹಲವಾರು ಗಣ್ಯತಿಗಣ್ಯರು ಉಪಸ್ಥಿತರಿದ್ದರು.