ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸ್ ಪಥಸಂಚಲನ

ಅಥಣಿ : ಸೆ.22:ಗಣೇಶ ಚತುರ್ಥಿ ಮತ್ತು ಈದ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯುತವಾಗಿ ಆಚರಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಯಾವುದೇ ರೀತಿಯ ಅಹಿತರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಅಡ್ಡಿ ಆತಂಕವಿಲ್ಲದೇ ಎರಡು ಹಬ್ಬಗಳನ್ನು ಆಚರಿಸುವ ನಿಟ್ಟಿನಲ್ಲಿ ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಹಾಗೂ ಪ್ರಮುಖ ಬೀದಿಗಳಲ್ಲಿ ಸ್ಥಳೀಯ ಠಾಣೆಯ ಪೆÇಲೀಸ ಸಿಬ್ಬಂದಿಗಳು ಹಾಗೂ ಕೆಎಸ್ ಆರ್ ಪಿ ಪೆÇೀಲೀಸರು ಸೇರಿ ಪಥಸಂಚಲನ ನಡೆಸಿದರು.
ಈ ವೇಳೆ ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ ಮಾತನಾಡಿ ಪಟ್ಟಣದಲ್ಲಿ ಶಾಂತಿಯುತವಾಗಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಗೆ ಅಥಣಿ ವೃತ್ತ ಪೆÇಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಯಾವುದೇ ರೀತಿಯ ಅಡೆತಡೆ ಅನಾಹುತಗಳು ಆಗದಂತೆ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಟ್ಟಣದಲ್ಲಿ ಪೆÇಲೀಸ ಇಲಾಖೆ ಪಥಸಂಚಲನೆ ನಡೆಸಿದೆ. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳಲ್ಲಿ ಸರ್ಕಾರ ಸೂಚಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರೇ ಮಾಡಲಿ ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು,
ಈ ಸಂದರ್ಭದಲ್ಲಿ ಪಿಎಸ್ ಐಗಳಾದ ಶಿವಶಂಕರ ಮುಕರಿ. ರಾಕೇಶ್ ಬಗಲಿ ಹಾಗೂ ಹೆಚ್ಚುವರಿ ಪಿಎಸ್ ಐ ಚಂದ್ರಶೇಖರ ಸಾಗನೂರ. ಸೇರಿದಂತೆ ಅಥಣಿ ಪೆÇೀಲಿಸ ಠಾಣೆಯ ಎಲ್ಲ ಪೆÇೀಲಿಸ್ ಸಿಬ್ಬಂದಿಗಳು ಹಾಗೂ ಕೆಎಸ್ ಆರ್ ಪಿ ಪೆÇೀಲೀಸರು ಪಥಸಂಚಲನದಲ್ಲಿ ಭಾಗವಹಿಸಿದ್ದರು,