ಗಣೇಶ ಮೂರ್ತಿ ವಿಸರ್ಜನೆಗೆ ಸಿದ್ದತೆ: ಖಾಸಭಾವಿಗೆ ಎಡಿಸಿ ಭೇಟಿ ಪರಿಶೀಲನೆ

ರಾಯಚೂರು,ಸೆ.೧೨- ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ನಗರದ ಮಾವಿನ ಕೆರೆಯ ಹತ್ತಿರದ ಖಾಸಭಾವಿಗೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಭೇಟಿ ನೀಡಿ ಸ್ವಚ್ಛತೆ ಕಾರ್ಯವನ್ನು ಪರಿಶೀಲಿಸಿದರು.
ಸೆ.೧೧ರ(ಸೋಮವಾರ)ದಂದು ಖಾಸಭಾವಿಗೆ ಭೇಟಿ ನೀಡಿದ ಅವರು, ಗಣೇಶ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮತ್ತು ವಿಸರ್ಜನೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಖಾಸಭಾವಿಯನ್ನು ಉತ್ತಮವಾಗಿ ಸ್ವಚ್ಛಗೊಳಿಸಬೇಕು ಎಂದು ಸಂಬಂದಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.