ಗದಗ: ಲಾಕ್‍ಡೌನ್ ಜೂನ್ 7ರವರೆಗೆ ಮುಂದುವರಿಕೆ

ಗದಗ ಜೂ.2 : ಗದಗ ಜಿಲ್ಲೆಯಲ್ಲಿ ಕೋರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಮೇ 27 ರಿಂದ 5 ದಿನ ಜಾರಿಗೊಳಿಸಲಾದ ಕಠಿಣ ಮಾರ್ಗಸೂಚಿಗಳ ಸಂಪೂರ್ಣ ಲಾಕ್‍ಡೌನ್‍ನಿಂದಾಗಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಂಪೂರ್ಣ ಲಾಕ್‍ಡೌನ್‍ನ್ನು ಜೂನ್ 7 ರವರೆಗೆ ವಿಸ್ತರಿಸಲಾಗಿದ್ದು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದ ವಿಡಿಯೋ ಕಾನ್ಫರನ್ಸ್ ಹಾಲ್‍ನಲ್ಲಿ ಜರುಗಿದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂನ 1 ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 7 ಬೆಳಿಗ್ಗೆ 6 ಗಂಟೆಯವರೆಗೆ ನಿರ್ದಿಷ್ಟ ಚಟುವಟಿಕೆ ಹಾಗೂ ಸೇವೆಗಳಿಗೆ ಅವಕಾಶ ನೀಡಿ, ಇನ್ನುಳಿದ ಎಲ್ಲ ಚಟುವಟಿಕೆ ಹಾಗೂ ಜನರ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ಸಲುವಾಗಿ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವುದು ಹಾಗೂ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕೆಳಗಿನಂತೆ ಕೆಲವು ಅಗತ್ಯ ಸೇವೆಗಳಿಗೆ ಅವಕಾಶ ನೀಡಿ, ಇನ್ನುಳಿದಂತೆ ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ಹೂ-ಹಣ್ಣು-ತರಕಾರಿಗಳ ವ್ಯಾಪಾರವನ್ನು ತಳ್ಳುವ ಗಾಡಿ ಅಥವಾ ಆಟೋ ರಿಕ್ಷಾಗಳ ಮೂಲಕ ಖರೀದಿದಾರರ ಮನೆಗಳ ಓಣಿಗಳಲ್ಲಿ ಕೋವಿಡ್-19 ಮುನ್ನೆಚ್ಚರಿಕಾ ಕ್ರಮವಹಿಸಿ ಮಾರಾಟ ಮಾಡಲು ಅನುಮತಿಸಿದೆ ಎಂದರು.
ಎಲ್ಲ ದಿನಸಿ ಅಂಗಡಿಗಳನ್ನು ಜೂನ್ 1 ಮತ್ತು 2 ರಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತೆರೆಯಲು ಅನುಮತಿಸಿದೆ. ಉಳಿದಂತೆ ಜೂನ್ 3 ರಿಂದ 7 ರವರೆಗೆ ದಿನಸಿ ವಸ್ತುಗಳನ್ನು ಮನೆಗೆ ಸರಬರಾಜು (ಹೊಂ ಡಿಲೇವರಿ) ಮುಖಾಂತರ ಮಾಡಲು ಅವಕಾಶ ನೀಡಿದೆ. ಎಲ್ಲ ಮಾಂಸ ಮಾರಾಟ ಅಂಗಡಿಗಳನ್ನು ಜೂನ 1 ಮತ್ತು 2 ರಂದು ಬೆಳಿಗ್ಗೆ 6 ರಿಂದ 10 ವರೆಗೆ ತೆರೆಯಲು ಅನುಮತಿಸಿದೆ. ಉಳಿದಂತೆ ಜೂನ 3 ರಿಂದ 7 ಬೆಳಿಗ್ಗೆ 6 ಗಂಟೆವರೆಗೆ ಜಿಲ್ಲೆಯ ಎಲ್ಲ ಮಾಂಸ ಅಂಗಡಿ ಮುಚ್ಚುವದು. ಹಾಲಿನ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಬೆಳಿಗ್ಗೆ 8 ಗಂಟೆಯವರೆಗೆ ತೆರೆದು ವ್ಯವಹರಿಸಲು ಅವಕಾಶ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಪರಿಕರಗಳು, ಯಂತ್ರೋಪಕರಣಗಳು, ಬೀಜ ಮತ್ತು ರಸಗೊಬ್ಬರ ಮಾರಾಟಕ್ಕೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅನುಮತಿ ನೀಡಲಾಗಿದೆ. ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲ ರೀತಿಯ ಹೋಟೆಲ್‍ಗಳನ್ನು ಬಂದ್ ಮಾಡಬೇಕು. ವೈನ್ ಶಾಪ್, ಬಾರ್-ರೆಸ್ಟೋರೆಂಟ್‍ಗಳನ್ನು ತೆರೆಯಲು ಅನುಮತಿ ಇರುವುದಿಲ್ಲ.
ಬ್ಯಾಂಕ್ ಮತ್ತು ಅಂಚೆ ಕಛೇರಿಗಳು ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರೊಂದಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಈ ಮೊದಲೇ ಅನುಮತಿ ಪಡೆದ ಮದುವೆ ಕಾರ್ಯಕ್ರಮಕ್ಕೆ ಅನುಮತಿಸಿದೆ. ಕೋವಿಡ್ ಮಾರ್ಗಸೂಚಿಯನ್ವಯ 05 ಜನಕ್ಕೆ ಮೀರದಂತೆ ಅಂತ್ಯ ಸಂಸ್ಕಾರ ನಡೆಸಲು ಅನುಮತಿ ನೀಡಲಾಗಿದೆ . ಈ ಎಲ್ಲ ನಿರ್ಬಂಧಗಳ ಸರಿಯಾದ ಅನುಷ್ಟಾನವನ್ನು ವಿವಿಧ ಇಲಾಖಾಧಿಕಾರಿಗಳು ನಿರ್ವಹಿಸಬೇಕು. ಸೋಂಕು ತಡೆಗೆ ಕಠಿಣ ಮಾರ್ಗಸೂಚಿಗಳ ಸರಿಯಾದ ಪಾಲನೆಯಾಗುವಂತೆ ನಿಗಾ ವಹಿಸುವಂತೆ ಸೂಚಿಸಿದರು.
ಜಿಲ್ಲಾ ಪೆÇಲೀಸ್ ವರಿಷ್ಟಾದಿಕಾರಿ ಯತೀಶ್ ಎನ್ ಮಾತನಾಡಿ ಜಿಲ್ಲಾದ್ಯಂತ ಮಾರ್ಗಸೂಚಿಗಳ ಪಾಲನೆ ಸರಿಯಾಗಿ ಆಗಬೇಕು. ಜನದಟ್ಟಣೆ ಆಗದಂತೆ ಪೆÇಲೀಸ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಅನಗತ್ಯ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದ್ದು ಸಾರ್ವಜನಿಕರ ವಿನಾಕಾರಣ ಸಂಚಾರಕ್ಕೆ ಅವಕಾಶ ನೀಡಬಾರದು. ಒಟ್ಟಾರೆಯಾಗಿ ಕೋವಿಡ್ ದೃಢ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಿ.ಇ.ಓ ಭರತ್ ಎಸ್ ಮಾತನಾಡಿ ಮುಂದಿನ 5 ದಿನಗಳ ಕಾಲ ವಿಧಿಸಲಾದ ಕಠಿಣ ಮಾರ್ಗಸೂಚಿಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು. ಇದರೊಂದಿಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಆರೋಗ್ಯ ಸಮೀಕ್ಷೆ, ಅರ್ಹರಿಗೆ ಲಸಿಕಾಕರಣ ನಿರಂತರವಾಗಿರಬೇಕು. ಜೊತೆಗೆ ವೈದ್ಯರ ನಡೆ ಹಳ್ಳೀಯ ಕಡೆ ಕಾರ್ಯಕ್ರಮ ಪರಿಣಾಮಕಾರಿಯಾಗಿ ಆಯೋಜಿಸಿ ಅನುಷ್ಟಾನಗೊಳಿಸುವುದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಶ್ರಮಿಸಭೇಕೆಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ಡಿ.ವೈ.ಎಸ್.ಪಿ. ಪ್ರಹ್ಲಾದ್ ರಾವ್, ನಗರಸಭೆ ಪೌರಾಯುಕ್ತ ರಮೇಶ ಜಾಧವ ಸೇರಿದಂತೆ ಪೆÇಲೀಸ ಇಲಾಖೆಯ ಅಧಿಕಾರಿಗಳು , ತಹಶೀಲ್ದಾರರು , ತಾ.ಪಂ. ಇ.ಓಗಳು ಹಾಜರಿದ್ದರು.