
“ಉತ್ತರಕಾಂಡ” ಚಿತ್ರದಲ್ಲಿ ನಟ ಡಾಲಿ ಧನಂಜಯ್ ಗಬ್ರು ಸತ್ಯನಾಗಿ ಆರ್ಭಟಿಸಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಾತ್ರದ ಟೀಸರ್ ಅನಾವರಣ ಮಾಡುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಿದೆ.
ನಟ ಧನಂಜಯ್ ಪಾತ್ರವಾದ “ಗಬ್ರು ಸತ್ಯ”ನ ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿದ್ದು ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. “ಉತ್ತರಕಾಂಡ” ಚಿತ್ರ ಉತ್ತರ ಕರ್ನಾಟಕದ ಪ್ರದೇಶದಲ್ಲಿ ನಡೆಯುವ ಕಥೆಯಾಗಿದ್ದು, ಗಬ್ರು ಸತ್ಯ ಎಂಬ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ.
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮತ್ತು ದಿಗಂತ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಕೆ ಆರ್ ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ಚಿತ್ರವನ್ನು ರೋಹಿತ್ ಪದಕಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಮತ್ತು ಚರಣ್ ರಾಜ್ ಸಂಗೀತ ಈ ಚಿತ್ರಕ್ಕಿದೆ.
“ಉತ್ತರಕಾಂಡ” , ಕೆ ಅರ್ ಜಿ ಸ್ಟುಡಿಯೋಸ್ ಮತ್ತು ಧನಂಜಯ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಮೂರನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದ ಅತೀ ನಿರೀಕ್ಷಿತ ಚಿತ್ರವಾಗಿದ್ದು ಕುತೂಹಲ ಹೆಚ್ಚಿದೆ,