ಗಮನ ಸೆಳೆದ  ‘ಕಡಲತೀರದ ಭಾರ್ಗವ’

ಉತ್ಸಾಹಿ ಯುವಕರ ತಂಡದಿಂದ ಮೂಡಿಬಂದಿರುವ ‘ಕಡಲತೀರದ ಭಾರ್ಗವ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿವೆ. ಇ ವಾರ ತೆರೆಗೆ ಬಂದಿದೆ.

‘ಕಡಲತೀರದ ಭಾರ್ಗವ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ಡಾ. ಶಿವರಾಮ ಕಾರಂತರು.  ‘ಕಡಲತೀರದ ಭಾರ್ಗವ’ ಎಂಬ ಬಿರುದಿನಿಂದಲೇ  ಪ್ರಸಿದ್ಧರಾದವರು. ಆದರೆ, ಅವರಿಗೂ, ಈ ಚಿತ್ರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎನ್ನುತ್ತಾರೆ  ನಿರ್ದೇಶಕ  ಪನ್ನಗ ಸೋಮಶೇಖರ್.

 ‘ಕಡಲು ಎಂದರೆ ಅಂತ್ಯವಿಲ್ಲದ್ದು  ನಾಯಕ ಭಾರ್ಗವ, ಪರಶುರಾಮನ ಗುಣಲಕ್ಷಣಗಳನ್ನು ಹೊಂದಿರುತ್ತಾನೆ. ಏನೇ ಆದರೂ ಗುರಿ ಸಾಧಿಸುತ್ತೇನೆ ಎಂಬ ಛಲದಿಂದ ಮುನ್ನಡೆಯುತ್ತಿರುತ್ತಾನೆ. ಹಾಗಾಗಿ, ಚಿತ್ರಕ್ಕೆ ‘ಕಡಲತೀರದ ಭಾರ್ಗವ’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರ ಎಂದಿದ್ದಾರೆ.

‘ಒಬ್ಬ ಮನುಷ್ಯನಲ್ಲಿ ಎಲ್ಲ ತರಹದ ಭಾವನೆಗಳಿರುತ್ತವೆ. ಆ ಎಮೋಷನ್ಗಳನ್ನು ಇಟ್ಟುಕೊಂಡು ಮಾಡಿರುವ ಕಥೆಯೇ ‘ಕಡಲತೀರದ ಭಾರ್ಗವ’’ ಎನ್ನುತ್ತಾರೆ ಚಿತ್ರದ ನಾಯಕರಲ್ಲೊಬ್ಬರಾದ ವರುಣ್ ರಾಜು.

ಈಗಾಗಲೇ ‘ಕಡಲತೀರದ ಭಾರ್ಗವ’ ಚಿತ್ರದ ಮೊದಲ ಟಿಕೆಟ್ ದಾಖಲೆಯ ಎರಡೂವರೆ ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಮಾತಾಟವಾಗಿದೆ. ನಾಯಕ ವರುಣ್ ರಾಜು ಸಂಬಂಧಿ ಮೋಹನ್ ರಾಜು ದುಡ್ಡು ಕೊಟ್ಟು ಮೊದಲ ಟಿಕೆಟ್ ಪಡೆದಿದ್ದಾರೆ.

 ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಚಿತ್ರಕ್ಕೆ ಅನಿಲ್ ಸಿ.ಜೆ.  ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.