ಗಮನ ಸೆಳೆದ ‘ಕೋಟಿ’  ‘ಮಾತು ಸೋತು’ ಹಾಡು

ಡಾಲಿ ಧನಂಜಯ್ ಅಭಿನಯದ  “ಕೋಟಿ” ಚಿತ್ರದ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ.ಚಿತ್ರದ ಮೇಲಿನ ಕುತೂಹಲ ಹೆಚ್ಚಳ ಮಾಡಿಧ.

 ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಚಿತ್ರವನ್ನು ಪರಮ್ ಆಕ್ಷನ್ ಕಟ್ ಹೇಳಿದ್ದು  ಡಾಲಿ ಧನಂಜಯ ಎದುರು ಮೋಕ್ಷಾ ಕುಶಾಲ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರ ಜೂನ್ 14 ರಂದು ತೆರೆಗೆ ಬರಲಿದ್ದು ಒಂದೊಂದೇ ಪಾತ್ರವನ್ನು ಚಿತ್ರತಂಡ ಪರಿಚಯಿಸುತ್ತಿದ್ದು ಇದೀಗ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.

ನಿರ್ದೇಶಕ ‘ಪರಮ್ ಮಾತನಾಡಿ, “ವಾಸುಕಿ ಹೊಸ ತಲೆಮಾರಿನ ಪ್ರತಿಭಾವಂತ ಸಂಗೀತ ನಿರ್ದೇಶಕ. ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಅಭಿಮಾನಿ ನಾನು. ಈ ಇಬ್ಬರ ಕಾಂಬಿನೇಷನ್ನಿನ ಈ ಹಾಡನ್ನು ಅರ್ಮಾನ್ ಮಲಿಕ್ ತುಂಬಾ ಚೆನ್ನಾಗಿ ಹಾಡಿದ್ದಾರೆ. ಈ ಹಾಡು ಕನ್ನಡದ ಕಿವಿ ಮತ್ತು ಮನಸುಗಳಿಗೆ ಇಷ್ಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.

ಸಂಗೀತ ನಿರ್ದೇಶಕ ವಾಸುಕಿ ವೈಭವ್ ” ಮಾತನಾಡಿ ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಷನ್ನಿನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ ಜತೆ ಕೆಲಸ ಮಾಡುವುದು ಯಾವಾಗಲೂ ಖುಷಿ ಮತ್ತು ಕಲಿಕೆಯ ವಿಚಾರ. ಜನರಿಗೆ ಖಂಡಿತ ಈ ಹಾಡು ಇಷ್ಟವಾಗತ್ತೆ‌ ಅನ್ನೊ ನಂಬಿಕೆ ಇದೆ” ಎಂದು ಹೇಳಿದರು.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಮುಂದಿನ ತಿಂಗಳು ತೆರೆಗೆ

ಡಾಲಿ ಧನಂಜಯ ಮತ್ತು ಮೋಕ್ಷಾ ಕುಶಾಲ್ ಅಭಿನಯದ ” ಕೋಟಿ” ಚಿತ್ರದ  ಮೊದಲ ಹಾಡು ” ಮಾತು ಸೋತು” ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಚಿತ್ರ ಜೂನ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಗುರುದೇವ್ ಹೋಯ್ಸಳ ಚಿತ್ರ ಬಿಡುಗಡೆಯಾದ ಬರೋಬ್ಬರಿ ಒಂದು ವರ್ಷಕ್ಕೂ ಅಧಿಕ ಸಮಯದ ನಂತರ ಡಾಲಿ‌ಧನಂಜಯ ಅವರ ಚಿತ್ರ ತೆರೆಗೆ ಬರುತ್ತಿದೆ.