ಗಮನ ಸೆಳೆದ `ಜಸ್ಟ್ ಪಾಸ್’ ಟ್ರೇಲರ್

“ದೊಡ್ಡಟ್ಟಿ ಬೋರೋಗೌಡ” ಸದಭಿರುಚಿ ಮತ್ತು ಪ್ರಶಸ್ತಿ ವಿಜೇತ ಚಿತ್ರ ನೀಡಿ ಗಮನ ಸೆಳೆದಿರುವ ನಿರ್ದೇಶಕ ಕೆ.ಎಂ ರಘು ಇದೀಗ, “ಜಸ್ಟ್ ಪಾಸ್” ಎನ್ನುವ ವಿಭಿನ್ನ ಕಾನ್ಸೆಪ್ಟ್ ನೊಂದಿಗೆ ಚಿತ್ರವನ್ನು ತೆರೆಗೆ ತರಲು ಸಜ್ಜಾಗಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ರೈಲರ್ ಬಿಡುಗಡೆ ಮಾಡಬೇಕಾಗಿತ್ತು ಕಾರಣಾಂತರದಿಂದ ಅವರ ಉಪಸ್ಥಿತಿ ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕ ಕೆವಿ ಶಶಿಧರ್ ತಾಯಿ ಪ್ರೇಮ ಟ್ರೈಲರ್ ಬಿಡುಗಡೆ ಮಾಡಿ “ಜಸ್ಟ್ ಪಾಸ್” ಚಿತ್ರಕ್ಕೆ ಶುಭಹಾರೈಸಿದರು.

ಚಿತ್ರ ಫೆಬ್ರವರಿ 9ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮಾತಿಗಿಳಿದ ನಿರ್ದೇಶಕ ಕೆ.ಎಂ.ರಘು,  ಚಿತ್ರ ಇಷ್ಟು ಅದ್ದೂರಿಯಾಗಿ ಬರಲು ನಿರ್ಮಾಪಕ ಕೆ.ವಿ.ಶಶಿಧರ್ ಕಾರಣ. ಯಾವುದೇ ಕೊರತೆ ಇಲ್ಲದೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರಿಗೂ ಸಮಯದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು.

ನಿರ್ಮಾಪಕ ಕೆ.ವಿ ಶಶಿಧರ್,ಟ್ರೇಲರ್ ನೋಡಿದ ಮೇಲೆ ಬಹಳ ಖುಷಿಯಾಯಿತು. ಚಿತ್ರ ಕೂಡ ಚೆನ್ನಾಗಿ ಬಂದಿದೆ. ಪೆÇ್ರೀತ್ಸಾಹ ನೀಡಿ ಎಂದು ಕೇಳಿಕೊಂಡರು

ನಾಯಕ ಶ್ರೀ, ಚಿತ್ರದ ಹಾಡುಗಳು ಹಾಗೂ ಟ್ರೇಲರ್ ತುಂಬಾ ಚೆನ್ನಾಗಿದೆ. ಚಿತ್ರ ಇನ್ನೂ ಚೆನ್ನಾಗಿದೆ  ಚಿತ್ರಕ್ಕೆ  ಬೆಂಬಲವಿರಲಿ ಎಂದರೆ ನಾಯಕಿ ಪ್ರಣತಿಚಿತ್ರದಲ್ಲಿ “ಜಸ್ಟ್ ಪಾಸ್” ವಿದ್ಯಾರ್ಥಿ ಎಂದು ತಮ್ಮ ಪಾತ್ರದ ಬಗ್ಗೆ  ಮಾಹಿತಿ ನೀಡಿದರು.

ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಛಾಯಾಗ್ರಾಹಕ ಸುಜಯ್ ಕುಮಾರ್, ಹಾಡು ಬರೆದಿರುವ ಪ್ರಮೋದ್ ಮರವಂತೆ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಕಲಾವಿದರಾದ “ಜಸ್ಟ್ ಪಾಸ್” ಚಿತ್ರದ ಕುರಿತು ಮಾತನಾಡಿದರು

ಶರಣ್ ಹಾಡು ಬಿಡುಗಡೆ

ನಟ ಶರಣ್ ಅವರು ಜಸ್ಟ್ ಪಾಸ್ ಚಿತ್ರಕ್ಕೆ ಹಾಡಿರುವ ಹಾಡನ್ನು ಇಂದು ಬಿಡುಗಡೆ ಮಾಡಿದ್ದು ಪಡ್ಡೆ ಹುಡುಗರು ಹೆಜ್ಜೆ ಹಾಕಲು ಹೇಳಿ ಮಾಡಿಸಿದಂತಿದೆ. ಇದೇ ಪೆಬ್ರವರಿ ೯ ಕ್ಕೆ ಚಿತ್ರ ತೆರೆಗೆ ಬರುತ್ತಿದೆ