
ಶಿವಮೊಗ್ಗ, ಮಾ.18: 12 ನೇ ಶತಮಾನದ ಮಹಾನ್ ಶಿವಶರಣೆ ಅಕ್ಕಮಹಾದೇವಿ ಅವರ ಜನ್ಮ ಸ್ಥಳ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಉಡುತಡಿಯಲ್ಲಿ ನಿರ್ಮಿಸಲಾಗಿರುವ ಅಕ್ಕಮಹಾದೇವಿಯವರ 51 ಅಡಿ ಎತ್ತರದ ಪ್ರತಿಮೆಯು ಸಾರ್ವಜನಿಕರ ಕಣ್ಮನ ಸೆಳೆಯುತ್ತಿದೆ.ಮಾ. 17 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅಕ್ಕನ ಪ್ರತಿಮೆಯಿರುವ ಸ್ಥಳವನ್ನು ದೆಹಲಿಯ ಅಕ್ಷರಧಾಮ ಮಾದರಿಯಲ್ಲಿ ಅಭಿವೃದ್ದಿಗೊಳಿಸಲಾಗಿದೆ.ಹಾಗೆಯೇ ಅಕ್ಕನ ಬದುಕಿನ ಮೇಲೆ ಬೆಳಕು ಚೆಲ್ಲುವ ವಿವಿಧ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಜೊತೆಗೆ ಉದ್ಯಾನವನದ ಸುತ್ತಲೂ ಕಂದಕ ನಿರ್ಮಿಸಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದಕ್ಕೆ ತುಂಗಾಭದ್ರಾ ನದಿಯಿಂದ ನೀರು ಹರಿಸುವ ವ್ಯವಸ್ಥೆ ಮಾಡಲಾಗುತ್ತಿದೆ.