`ಗರುಡ ಪುರಾಣ’ ಸದ್ಯದಲ್ಲಿಯೇ ತೆರೆಗೆ

ಕಾಂತಾರ ಚಿತ್ರದ ಆನ್‍ಲೈನ್ ಎಡಿಟರ್ ಮಂಜುನಾಥ್ ಬಿ ನಾಗಬಾ “ಗರುಡ ಪುರಾಣ” ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ಧಾರೆ. ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದರೆ.

ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸಿದ್ದಾರೆ, ” ಗರುಡ ಪುರಾಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಶೀಘ್ರದಲ್ಲಿ ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ.

ಮನುಷ್ಯನಿಗೆ ಪಾಪ, ಪುಣ್ಯಕ್ಕೆ ಅನುಗುಣವಾಗಿ ಮೇಲೆ ಯಾವ ಯಾವ ಶಿಕ್ಷೆಯಿದೆ ಎಂದು ತಿಳಿಸುವ ಪುರಾಣವೇ “ಗರುಡ ಪುರಾಣ”. ಚಿತ್ರದ ಒಂದು ಭಾಗಕ್ಕೆ  ಗರುಡ ಪುರಾಣದ ಕೆಲವು ಅಂಶಗಳು ಹೊಂದಿಕೆಯಾಗುತ್ತದೆ. ಹಾಗಾಗಿ ” ಗರುಡ ಪುರಾಣ ” ಶೀರ್ಷಿಕೆ ಇಟ್ಟಿದ್ದೇವೆ ಎಂದಿದ್ದಾರೆ ನಿರ್ದೇಶಕರು.

ಮಧ್ಯಮ ಕುಟುಂಬವೊಂದರಲ್ಲಿ ನಡೆಯುವ ಕಥೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಚಿತ್ರೀಕರಣ ಹಾಗೂ ಪೆÇೀಸ್ಟ್ ಪೆÇ್ರಡಕ್ಷನ್ ವರ್ಕ್ ಮುಕ್ತಾಯವಾಗಿದ್ದು, “ಗರುಡ ಪುರಾಣ” ತೆರೆಗೆ ಬರಲು ಸಿದ್ದವಾಗಿದೆ ಎಂದು ನಿರ್ದೇಶಕ ಮಂಜುನಾಥ್ ಬಿ ನಾಗಬಾ ತಿಳಿಸಿದ್ದಾರೆ,

ಮಂಜುನಾಥ್ ಬಿ ನಾಗಬಾ ಚಿತ್ರದ ನಾಯಕನಾಗಿಯೂ ನಟಿಸಿದ್ದು, ದಿಶಾ ಶೆಟ್ಟಿ  ನಾಯಕಿಯಾಗಿ ಅಭಿನಯಿಸಿದ್ದಾರೆ. “ಭಜರಂಗಿ” ಖ್ಯಾತಿಯ ಚೆಲುವರಾಜು, ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ರಾಕೇಶ್ ಆಚಾರ್ಯ ಸಂಗೀತ ನೀಡಿದ್ದಾರೆ. ಸುನೀಲ್ ನರಸಿಂಹಮೂರ್ತಿ ಚಿತ್ರಕ್ಕೆ ಛಾಯಾಗ್ರಹಣವಿದೆ.