ಗರ್ಭಿಣಿಯರಲ್ಲಿ ಪೌಷ್ಠಿಕ ಆಹಾರ ಸೇವನೆ ಜಾಗೃತಿ ಅವಶ್ಯಕ

ಸಂಜೆವಾಣಿ ವಾರ್ತೆಹೊಸಪೇಟೆ ಸೆ.2: ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಸೇವನೆಯ ಬಗ್ಗೆ ಜಾಗೃತಿ ಅತ್ಯಾವಶ್ಯಕವಾಗಿದ್ದು ಸೂಕ್ತ ರೀತಿಯಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೇಮಲತಾ ಬಿ. ಹುಲ್ಲೂರ ಅವರು ತಿಳಿಸಿದರು.ಕಾನೂನು ಸೇವಾ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ನಗರದ ಚಿತ್ತವಾಡ್ಗಿಯಲ್ಲಿರುವ ಉರ್ದು ಶಾಲೆಯಲ್ಲಿ ವಿಶ್ವ ಪೌಷ್ಠಿಕ ಆಹಾರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಗರ್ಭಾವಸ್ಥೆಯಿಂದಲೇ ಮಹಿಳೆಯರಿಗೆ ಪೌಷ್ಠಿಕ ಆಹಾರ ಪದ್ಧತಿ ಕುರಿತು ಜಾಗೃತಿ ಮೂಡಿಸಿದಾಗ ಮಕ್ಕಳಿಗೆ ಹೆಚ್ಚು ಅನುಕೂಲ ಆಗುತ್ತದೆ. ಈ ನಿಟ್ಟಿನಲ್ಲಿ ಗರ್ಭಿಣಿಯರು ಹೆಚ್ಚಿನ ಅರಿವು ಹೊಂದಲು ಇಲಾಖೆ ಶ್ರಮಿಸಬೇಕು ಎಂದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕಿಶನ್ ಬಿ. ಮಾಡಲಗಿ ಅವರು ಮಾತನಾಡಿ ಪೌಷ್ಠಿಕ ಆಹಾರದ ಮೂಲಕ ಆರೋಗ್ಯ ಸಮೃದ್ಧಿ ಹಾಗೂ ಸಮತೋಲನ ಆರೋಗ್ಯಕ್ಕೆ ಹೆಚ್ಚು ಸಹಕಾರಾಗಿದ್ದು, ಗರ್ಭಾವಸ್ಥೆಯಲ್ಲಿಯೇ ಮಗುವಿನ ಆರೋಗ್ಯಕರ ಬೆಳವಣಿಗೆಗೆ ಪೌಷ್ಠಿಕ ಆಹಾರ ಹೆಚ್ಚು ಸಹಕಾರಿ ಆಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ಈ ಬಗ್ಗೆ ಗರ್ಭಿಣಿಯರಿಗೆ ಜಾಗೃತಿ ಮೂಡಿಸಬೇಕು ಎಂದರು.ಈ ಸಂದರ್ಭದಲ್ಲಿ 3ನೇ ಅಪರ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶರಾದ ಚೈತ್ರಾ ಜೆ. ಸೇರಿದಂತೆ ಕಾರ್ಯಕ್ರಮ ಅಧಿಕಾರಿ ಸುಭದ್ರಾ ದೇವಿ, ಅಂಬುಜಾ, ಎ.ಕರುಣಾನಿಧಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.