ಗಲಗ ವಿದ್ಯಾರ್ಥಿ ಮಿಮಿಕ್ರಿಯಲ್ಲಿ ಪ್ರಥಮ

ದೇವದುರ್ಗ,ಜ.೧೧- ಶಿವಮೊಗ್ಗದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಯಲ್ಲಿ ತಾಲೂಕಿನ ಗಲಗ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಅಮರೇಶ ನಾಗಪ್ಪ ಉತ್ತಮ ಸಾಧನೆ ಮಾಡಿದ್ದಾನೆ.
ಮಿಮಿಕ್ರಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ, ಅಮರೇಶ ಅಲ್ಲಿಯೂ ಪ್ರಥಮ ಸ್ಥಾನ ಪಡೆದು ಗ್ರಾಮದ ಕೀರ್ತಿ ಹೆಚ್ಚಿಸಿದ್ದಾನೆ ಎಂದು ಪ್ರಾಚಾರ್ಯ ತಿಮ್ಮಣ್ಣ ತಿಳಿಸಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.