ಗಾಂಜಾ ಗ್ಯಾಂಗ್‍ನ ಹೆಡೆಮುರಿ ಕಟ್ಟಿದ ಬೀದರ್ ಪೊಲೀಸ್ರು, ಬರೋಬ್ಬರಿ 1.18 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ

ಬೀದರ್, ಆ.23: ಬೀದರ್ ಪೆÇಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಗ್ಯಾಂಗ್?ನ ಹೆಡೆಮುರಿ ಕಟ್ಟಿದ್ದಾರೆ. ಅಂತರ್ ರಾಜ್ಯ ಮಟ್ಟದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಗ್ಯಾಂಗ್? ಅನ್ನು ಬೀದರ್ ಜಿಲ್ಲೆಯ ಮುನ್ನಾಖೇಳ್ಳಿ ಪೆÇಲೀಸರು ಅರೆಸ್ಟ್ ಮಾಡಿದ್ದು, ಬಂಧಿತರಿಂದ 1.18 ಕೋಟಿ ರೂಪಾಯಿ ಮೌಲ್ಯದ 118 ಕೆಜಿಯಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೀದರ್? ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮಂಗಲಿ ಟೋಲ್ ಬಳಿ ಗಾಂಜಾ ಸಾಗಿಸುತ್ತಿದ್ದ ಕಾರಿನ ಮೇಲೆ ಪೆÇಲೀಸರು ದಾಳಿ ನಡೆಸಿದ್ದಾರೆ. ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮುಂಬೈಗೆ ಗಾಂಜಾ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಗಾಂಜಾ ಗ್ಯಾಂಗ್?ನಲ್ಲಿ ಇನ್ನಿಬ್ಬರು ಪರಾರಿಯಾಗಿದ್ದು, ಅವರ ಬಂಧನ ಪೆÇಲೀಸರು ಕಾರ್ಯಚರಣೆ ನಡೆಸಿದ್ದಾರೆ. ಇನ್ನು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ಮುನ್ನಾಖೇಳ್ಳಿ ಪೆÇಲೀಸರಿಗೆ ಬೀದರ್ ಎಸ್ಪಿ ಮೆಚ್ಚುಗೆ ಸೂಚಿಸಿ, ಬಹುಮಾನ ಘೋಷಿಸಿದ್ದಾರೆ.