ಗಾಂಜಾ ಮಾರಾಟ ಆರೋಪಿ ಸೆರೆ

ಬೆಂಗಳೂರು,ಮಾ.೨೬-ನಾಗರಬಾವಿ ೨ನೇ ಹಂತದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಅನ್ನಪೂರ್ಣೇಶ್ವರಿನಗರ ಪೊಲೀಸರು ೧ ಕೆಜಿ ೭೦೦ ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಸುಂಕದಕಟ್ಟೆಯ ರಘು (೨೭) ಬಂಧಿತ ಆರೋಪಿಯಾಗಿದ್ದಾನೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಆರೋಪಿಯು ತೆಲಂಗಾಣದ ವಜ್ರಕಂಟೆಯಿಂದ ಗಾಂಜಾ ಪೆಡ್ಲರ್ ನಿಂದ ಗಾಂಜಾವನ್ನು ಖರೀದಿಸಿ ತಂದು ಮಾರಾಟ ಮಾಡುತ್ತಿದ್ದ ಎಂದರು.
ನಾಗರಬಾವಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿರಾಕಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಆರೋಪಿಯು ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತವಾದ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಅನ್ನಪೂರ್ಣೇಶ್ವರಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀನಿವಾಸ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.