ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ: ಆರೋಪಿ ಬಂಧನ

ಕಲಬುರಗಿ,ಜು.23-ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಲಬುರಗಿ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಮಲಾಪುರ ತಾಲೂಕಿನ ಸೊಂತ ಗ್ರಾಮದ ಕೃಷ್ಣಕುಮಾರ ಬಂಧಿತ ಆರೋಪಿ.
ಕೃಷ್ಣಕುಮಾರ ಗ್ರಾಮದಲ್ಲಿರುವ ತನ್ನ ಕಿರಾಣಿ ಅಂಗಡಿಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೆÇಲೀಸರು ದಾಳಿ ನಡೆಸಿದ್ದಾರೆ. ಒಟ್ಟು 2.35 ಕೆ.ಜಿ ಗಾಂಜಾ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.