ಗಾಂಧಿ ಜಯಂತಿ ಆಚರಣೆ

ಕೆ.ಆರ್.ಪುರ, ಅ.೩-ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಶಾಲೆಯ ಕಾರ್ಯದರ್ಶಿ ಯಶೋಧರ್ ರಾವ್ ಮೋಹರೆ ಅವರು ತಿಳಿಸಿದರು.
ಕೆ.ಆರ್.ಪುರ ಕ್ಷೇತ್ರದ ಹೊರಮಾವು ಅಗರ ಮೋಹರೆ ಪಬ್ಲಿಕ್ ಶಾಲೆಯಲ್ಲಿ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ವಿವಿಧ ವೇಷಭೂಷಣ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದರು.
ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಪಾಲಿಸುವ ಮೂಲಕ ದೇಶಕ್ಕೆ ಹಾಗೂ ಪೋಷಕರಿಗೆ ಕೀರ್ತಿ ತರುವಂತೆ ಕಿವಿಮಾತು ಹೇಳಿದರು.
ಮಕ್ಕಳು ಸ್ಪರ್ಧಾತ್ಮಕ ಕಾಲದಲ್ಲಿ ಜೀವನ ಸಾಗಿಸಲು ಸ್ಪರ್ಧಾತ್ಮಕ ಜೀವನಕ್ಕೆ ಹೊಂದಿಕೊಂಡು ಸಾಗ ಬೇಕೆಂದು ವಿವರಣೆ ನೀಡಿದರು.