ಗಾಣದಾಳ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಶಾಸಕ ಭೇಟಿ

ರಾಯಚೂರು.ಜೂ.೧೧-ಗಿಲ್ಲೇಸೂಗುರ ಮತ್ತು ಗಾಣದಾಳ ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ರವರು ಭೇಟಿ ನೀಡಿ, ಈ ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಜೀವನದ ಹಂಗು ತೊರೆದು ಮನೆಗೆ ಹೋಗಿ ಜನರ ಸೇವೆ ಸಲ್ಲಿಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ವೈದ್ಯಾಧಿಕಾರಿಗಳಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮಾಸ್ಕ್ ಸ್ಯಾನಿಟೈಸರ್, ತರಕಾರಿ ಮತ್ತು ಆಹಾರ ಪದಾರ್ಥಗಳ ಕಿಟ್‌ಗಳನ್ನು ವಿತರಣಾ ಮಾಡಿದರು.
ಶಾಸಕರು ಸ್ವಂತಃ ಖರ್ಚಿನಲ್ಲಿ ಲಾಕ್ ಡೌನ್ ಮುಗಿಯುವವರೆಗೂ ಪ್ರತಿದಿನ ಸಾವಿರಾರು ಜನರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಿದ್ದು ಇಲ್ಲಿಯವರೆಗೂ ಮೂವತ್ತು ನಲವತ್ತು ಸಾವಿರ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದು ರಾಯಚೂರು ಗ್ರಾಮೀಣ ಕ್ಷೇತ್ರದ ೧೧ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗಳಲ್ಲಿ ನಡೆಯುವ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ವೈದ್ಯಾಧಿಕಾರಿ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಆಸ್ಪತ್ರೆಗೆ ಬಂದಿರುವ ಗರ್ಭಿಣಿಯರಿಗೆ ಮತ್ತು ರೋಗಿಗಳಿಗೆ ಊಟ ನೀಡಿದರು.
ಈ ಸಂದರ್ಭದಲ್ಲಿ ಯಾರೂ ಕೂಡ ಕೊರೋನಾ ಬಗ್ಗೆ ಭಯ ಮತ್ತು ಆಂತಕ ಬೇಡ ಎಚ್ಚರವಿರಲ್ಲಿ ಎಲ್ಲರೂ ಕೂಡ ಮಾಸ್ಕ ಸ್ಯಾನಿಟೈಜರ್ ಮತ್ತು ಸಾಮಾಜಿಕ ಅಂತರ ಕಾಪಾಡಕೊಳ್ಳಲು ತಿಳಿಸಿದರು. ಕೆಮ್ಮು ನೆಗಡಿ ಜ್ವರ ಬಂದಾಗ ತಕ್ಷಣವೇ ನಿರ್ಲಕ್ಷ್ಯ ಮಾಡದೇ ವೈದ್ಯರಲ್ಲಿ ತೋರಿಸಿಕೊಳುವುದು ಸಲಹೆ ಪಡೆಯುವುದು ಒಳ್ಳೆಯದು ಎಂದರು. ೪೫ ವಯಸ್ಸು ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಹಾಕಿಕೊಳ್ಳಲು ತಿಳಿಸಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಿರಿಯ ಮುಖಂಡರು ಪೊಲೀಸ್ ಅಧಿಕಾರಿಗಳು, ಉಪಸ್ಥಿತರಿದ್ದರು.