ಗಾದಗಿ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಬೀದರ್:ಆ.4: ತಾಲ್ಲೂಕಿನ ಗಾದಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮುಫೀದ್ ಅಹಮ್ಮದ್ ಹಾಗೂ ಉಪಾಧ್ಯಕ್ಷೆಯಾಗಿ ಭಾರತಿಬಾಯಿ ರಮೇಶ ಆಯ್ಕೆಯಾಗಿದ್ದಾರೆ.
ಪಂಚಾಯಿತಿ ಕಚೇರಿಯಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆ ಅವಿರೋಧವಾಗಿ ನಡೆಯಿತು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ವಿಶಾಲ್ ದೊಡ್ಡಿ ಶಾಲು ಹೊದಿಸಿ ಸನ್ಮಾನಿಸಿದರು. ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಇದ್ದರು.