
ಕಲಬುರಗಿ:ಜು.2:ಶುಕ್ರವಾರ ಶಿರವಾಳವಾಡಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡು ಸೋಲಾಪೂರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಣೂರ ಗ್ರಾಮದ ಗಾಯಾಳುಗಳನ್ನು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ಆಸ್ಪತ್ರೆಯಲ್ಲಿ ಭೇಟಿಯಾಗಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.
ಶುಕ್ರವಾರ ಸಾಯಂಕಾಲ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಅವರು ತಡರಾತ್ರಿವರೆಗೆ ಆಸ್ಪತ್ರೆಯಲ್ಲಿದ್ದು ಅಗತ್ಯವಾದ ಚಿಕಿತ್ಸೆಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಸೂಚಿಸಿದರು.