ಗಾಯಾಳು ರಿಕ್ಷಾ ಚಾಲಕನಿಗೆಗೃಹ ಸಚಿವರಿಂದ ನೆರವು


ಮಂಗಳೂರು, ನ.೨೪- ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಕಳೆದ ಶನಿವಾರ ಆಟೊ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿದ್ದರಿಂದ ತೀವ್ರ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ನಿನ್ನೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವೈಯಕ್ತಿಕವಾಗಿ ೫೦ ಸಾವಿರ ರೂ. ಧನಸಹಾಯ ನೀಡಿದರು. ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಐಜಿಪಿ ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಅಂಶು ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.