ಗಾಯಿತ್ರಿ ಸಿದ್ಧೇಶ್ವರ್ ಜನ್ಮದಿನ ಆಚರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಏ.೧೭ : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು. ನಗರದ ಜಿ.ಎಂ.ಐ.ಟಿ. ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ್ ಸಮ್ಮುಖದಲ್ಲಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಕೇಕ್ ಕತ್ತರಿಸಿ ಎಲ್ಲರಿಗೂ ಸಿಹಿ ತಿನ್ನಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು.ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹೋದರಿ ಶ್ರೀಮತಿ ಗಾಯಿತ್ರಿ ಸಿದ್ಧೇಶ್ವರ್ ಅವರಿಗೆ ದೇವರು ಆರೋಗ್ಯ, ಆಯುಷ್ಯ ನೀಡಲಿ ಎಂದು ಶುಭ ಹಾರೈಸಿ, ಚುನಾವಣೆಯಲ್ಲಿ ಗೆಲುವು ಸಾಧಿಸುವಂತೆ ಆಶೀರ್ವದಿಸಿದರು.ಆವರಗೆರೆ ಬಳಿಯ ಗೋ ಶಾಲೆಗೆ ಭೇಟಿ ನೀಡಿದ  ಗಾಯಿತ್ರಿ ಸಿದ್ದೇಶ್ವರ್ ಗೋ ಮಾತೆಗೆ ಮೇವು ತಿನ್ನಿಸಿ ಪೂಜೆ ಸಲ್ಲಿಸಿದರು. ನಂತರ ಪುಟ್ಟರಾಜು ಗವಾಯಿಗಳ ಪುಣ್ಯ ಆಶ್ರಮಕ್ಕೆ ಭೇಟಿ ನೀಡಿ ಗವಾಯಿಗಳ ಗದ್ದುಗೆ ಪೂಜೆ ಸಲ್ಲಿಸಿ, ಅಂಧ ಮಕ್ಕಳಿಗೆ‌ ಸಿಹಿ ವಿತರಿಸಿದರು. ಅವರಗೆರೆಯ  ಜೈನ್ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡ ಜಿ.ಎಸ್.ಅನಿತ್ ಕುಮಾರ್, ಪುತ್ರಿ ಜಿ.ಎಸ್.ಅಶ್ವಿನಿ, ಗ್ಯಾರಳಿ ಶಿವು, ಗೌತಮ್ ಜೈನ್ ಇದ್ದರು.