ಗುಂಡಿಕ್ಕಿ ಉಗ್ರನ ಹತ್ಯೆ

ಜಮ್ಮು ಕಾಶ್ಮೀರ,ಫೆ.೨೮- ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿ ಕಾಶ್ಮೀರಿ ಪಂಡಿತರೊಬ್ಬರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಕಾರ್ಯಾಚರಣೆ ಕೈಗೊಂಡ ಭಾರತೀಯ ಸೇನೆಯ ಭದ್ರತಾ ಪಡೆಗಳು ಇಂದು ಮುಂಜಾನೆ ಅವಂತಿಪೋರಾ ಪ್ರದೇಶದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಎನ್ ಕೌಂಟರ್ ಮಾಡಿದ್ದಾರೆ.
ಪುಲ್ವಾಮಾದ ಪಡ್ಗಂಪುರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಇಂದು ಬೆಳಿಗ್ಗೆ ಎನ್?ಕೌಂಟರ್ ಮಾಡಿದೆ.
ಆದರೆ ಉಗ್ರನ , ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ. ಇದೇ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ಕೊಟ್ಟಿದ್ದಾರೆ. ಕಳೆದ ಫೆ.೨೬ ಮುಂಜಾನೆ ಕಾಶ್ಮೀರಿ ಪಂಡಿತ್ (ಸಂಜಯ್ ಶರ್ಮಾ) ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.