ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

ನವದೆಹಲಿ,ಏ. ೧೫- ರಾಷ್ಟ್ರ ರಾಜಧಾನಿ: ದೆಹಲಿಯ ದ್ವಾರಕಾ ಜಿಲ್ಲೆಯ ಬಿಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಚೇರಿಯಲ್ಲಿದ್ದಾಗಲೇ ಸ್ಥಳೀಯ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ. ರಾತ್ರಿ ೭:೩೦ ರ ಸುಮಾರಿಗೆ ಇಬ್ಬರು ಅಪರಿಚಿತರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಮೃತ ಸುರೇಂದ್ರ ಸೋದರ ಸಂಬಂಧಿ ರಾಮ್ ಸಿಂಗ್ ತಿಳಿಸಿದ್ದಾರೆ.
ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕೈಯಲ್ಲಿ ಹೆಲ್ಮೆಟ್‌ನೊಂದಿಗೆ ಕಚೇರಿಗೆ ಪ್ರವೇಶಿಸಿ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು, ದುಷ್ಕರ್ಮಿಗಳು ಹಲವಾರು ಸುತ್ತು ಗುಂಡು ಹಾರಿಸಿದರು, ಅದರಲ್ಲಿ ೪-೫ ಗುಂಡುಗಳು ಸುರೇಂದ್ರಗೆ ತಗುಲಿದವು. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ”ಕಚೇರಿಯೊಳಗಿದ್ದ ಜನರು ಸುರೇಂದ್ರನನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡಿದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು” ಎಂದು ಅವರು ಹೇಳಿದ್ದಾರೆ.
ಕಚೇರಿಯೊಳಗೆ “ಸುರೇಂದ್ರ ಮಟಿಯಾಳ ಟಿವಿ ನೋಡುತ್ತಿದ್ದಾಗ ಇನ್ನಿಬ್ಬರು ಕುಳಿತು ಮಾತನಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ನಡೆಸಿದಾಗ ಒಟ್ಟು ೪ ಜನರು ಕಚೇರಿಯೊಳಗೆ ಇದ್ದರು, ನನಗೆ ಏನು ಅರ್ಥವಾಗುವಷ್ಟರಲ್ಲಿ ಸುರೇಂದ್ರ ಮಟಿಯಾಳ ಮೇಲೆ ಗುಂಡು ಹಾರಿಸಲಾಗಿತ್ತು. ,” ಅವರು ಹೇಳಿದ್ದಾರೆ.ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.ದುಷ್ಕರ್ಮಿಗಳನ್ನು ಗುರುತಿಸಲು ಕಚೇರಿಯ ಸುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉದ್ದೇಶ ಸ್ಪಷ್ಟವಾಗಿಲ್ಲ ಮತ್ತು ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಹರ್ಷ ವರ್ಧನ್ ಹೇಳಿದ್ದಾರೆ. ಆರೋಪಿಗಳನ್ನು ಹಿಡಿಯಲು ಹಲವು ತಂಡಗಳನ್ನು ರಚಿಸಲಾಗಿದೆ. ಈ ಹಂತದಲ್ಲಿ ಉದ್ದೇಶ ಸ್ಪಷ್ಟವಾಗಿಲ್ಲ, ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ..