`ಗುಂಮ್ಟಿ’ ಹೊಸತನದ ಚಿತ್ರ

`ಕತ್ತಲೆ ಕೋಣೆ’ ಮತ್ತು `ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿದ ಸಂದೇಶ್ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾ ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ.

ಇದೀಗ `ಗುಂಮ್ಟಿ’ ಎಂದು ಹೆಸರಿಟ್ಟಿದ್ದು,  ಸಿನಿಮಾದಲ್ಲಿ ಸಂದೇಶ್ ಶೆಟ್ಟಿ ತೆರೆಮೇಲೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ

`ಗುಂಮ್ಟಿ’ ಸಿನಿಮಾದಲ್ಲಿ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ತೆರೆಮೇಲೆ ಅನಾವರಣವಾಗಲಿದೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷವನ್ನು `ಗುಂಮ್ಟಿ’ ಸಿನಿಮಾದಲ್ಲಿ ಮನಮುಟ್ಟುವಂತೆ ಹೇಳಲು ಹೊರಟಿದೆ ಚಿತ್ರತಂಡ.

ಈಗಾಗಲೇ ಸದ್ದಿಲ್ಲದೆ ಉಡುಪಿ, ಕುಂದಾಪುರ, ಶಿರಸಿ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರತಂಡ `ಗುಂಮ್ಟಿ’ ಚಿತ್ರೀಕರಣವನ್ನು ಯಶಸ್ವಿಯಾಗಿ  ಮುಗಿಸಿದೆ.

ವಿಕಾಸ್ ಎಸ್. ಶೆಟ್ಟಿ ನಿರ್ಮಿಸುತ್ತಿದ್ದಾರೆ. ಸಿನಿಮಾದಲ್ಲಿ ನಾಯಕ ಸಂದೇಶ್ ಶೆಟ್ಟಿ ಆಜ್ರಿ ಅವರಿಗೆ ವೈಷ್ಣವಿ ನಾಡಿಗ್ ನಾಯಕಿಯಾಗಿ ಜೋಡಿಯಾಗಿದ್ದು, ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.