
ಸೂರತ್, ಸೆಪ್ಟೆಂಬರ್ ೧೯-ಗುಜರಾತ್ ನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ನಗರಗಳು ಜಲಾವೃತಗೊಂಡಿವೆ . ಇದಲ್ಲದೇ ಮಧ್ಯಪ್ರದೇಶದಲ್ಲೂ ವರುಣನ ಅಬ್ಬರಕ್ಕೆ ನರ್ಮದಾ ನದಿ ತುಂಬಿ ಹರಿದಿದ್ದು, ಸರ್ದಾರ್ ಸರೋವರ ಅಣೆಕಟ್ಟಿನಿಂದ ೧೯ ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಇದರಿಂದಾಗಿ ನರ್ಮದಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳು ಜಲಾವೃತವಾಗಿವೆ.
ರಾಜ್ಯದ ೮ ಜಿಲ್ಲೆಗಳಿಂದ ಇದುವರೆಗೆ ೧೨,೬೪೪ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ೭ ಜಿಲ್ಲೆಗಳಿಂದ ೮೨೨ ಜನರನ್ನು ರಕ್ಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಳೆಯ ರಭಸಕ್ಕೆ ಹಲವೆಡೆ ಕಾರುಗಳು ಮುಳುಗಿವೆ. ರಾಜ್‌ಕೋಟ್, ಸೂರತ್ ಮತ್ತು ಗಿರ್ ಸೋಮನಾಥ ಜಿಲ್ಲೆಗಳು ಮಳೆಯಿಂದ ಹೆಚ್ಚು ಹಾನಿಗೊಳಗಾಗಿವೆ. ಈ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ೩೦೦ ಮಿ.ಮೀ ಮಳೆ ದಾಖಲಾಗಿದೆ.
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಎನ್‌ಡಿಆರ್‌ಎಫ್‌ನ ೧೦ ತಂಡಗಳು ಮತ್ತು ಎಸ್‌ಡಿಆರ್‌ಎಫ್‌ನ ೧೦ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಅವರ ತಂಡವು ಗುಜರಾತ್ ಪರಿಸ್ಥಿತಿ ನಿಭಾಯಿಸಲು ತ್ವರಿತ ಕಾರ್ಯನಿರ್ವಹಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಕ್ತಾರ ರಿಷಿಕೇಶ್ ಪಟೇಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಿಷಿಕೇಶ್ ಪಟೇಲ್ ಅವರು ತಮ್ಮ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳ ವಿವರಗಳನ್ನು ಪಡೆಯಲು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.
ರಿಷಿಕೇಶ್ ಪಟೇಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಕೈಲಾಸನಾಥನ್ ಮತ್ತು ಉಪಸ್ಥಿತರಿದ್ದರು.
ಹಿರಿಯ ಕಾರ್ಯದರ್ಶಿಗಳು.ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳ ನಿಯೋಜನೆಯಿಂದ ಪೀಡಿತ ಜಿಲ್ಲೆಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ, ನೀರಿನಲ್ಲಿ ಸಿಲುಕಿರುವ ಜನರನ್ನು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳ ಸಹಾಯದಿಂದ ಸ್ಥಳಾಂತರಿಸಲಾಗಿದೆ ಎಂದು ಅವರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು.