ಗುಡಪಳ್ಳಿ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಔರಾದ :ಅ.1: ತಾಲೂಕಿನ ಗುಡಪಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶಕುಂತಲ ರವೀಂದ್ರರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಣ ಬದ್ದುನಾಯಕ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

13 ಜನ ಸದಸ್ಯ ಬಲ ಹೊಂದಿದ ಗುಡುಪಳ್ಳಿ ಗ್ರಾಮ ಪಂಚಾಯಿತಿನ 12 ಜನ ಚುನಾವಣೆಯಲ್ಲಿ ಭಾಗಿಯಾಗಿದ್ದರು ಒಬ್ಬರು ಗೈರಾಗಿದ್ದರು ಎಲ್ಲರ ಒಮ್ಮತದಿಂದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಚುಣಾವಣೆ ಅಧಿಕಾರಿ ತಿಳಿಸಿದ್ದಾರೆ.

ಆಯ್ಕೆಯಾದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಗ್ರಾಮಸ್ಥರು, ಸರ್ವ ಸದಸ್ಯರು, ಬೆಂಬಲಿಗರು, ಹಿರಿಯರು, ಗ್ರಾ.ಪಂ ಸಿಬ್ಬಂದಿ ಗೌರವ ಸನ್ಮಾನ ಮಾಡಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷೆ ಶ್ರೀಮತಿ ಶಕುಂತಲ ರವೀಂದ್ರರೆಡ್ಡಿ ಸರ್ವ ಸದಸ್ಯರು ಹಾಗೂ ಗ್ರಾಮದ ಹಿರಿಯರನ್ನು ಒಗ್ಗೂಡಿಸಿಕೊಂಡು ಗ್ರಾಮದ ಅಭಿವೃದ್ದಿಗಾಗಿ ಹಗಲಿರುಳು ಶ್ರಮಿಸಿ ಜಾತಿ-ಭೇಧ ಮರೆತು ಪ್ರಾಮಾಣಿಕವಾಗಿ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚುನಾವಣಾಧಿಕಾರಿಯಾಗಿ ಎಮ್.ಡಿ.ಮಕ್ಕಸೂದ ಅಹ್ಮದ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ, ಗ್ರಾ.ಪಂ. ಸದ್ಯಸರು, ಸಿಬ್ಬಂದಿ ಸೇರಿದಂತೆ ಇನ್ನಿತರರು ಉಪಸ್ಥಿತಿ ಇದ್ದರು.