ಗುಡ್ಡಾ ದಂಪತಿಗಳಿಗೆ ಸನ್ಮಾನ

ಕಲಬುರಗಿ:ಮಾ.26:ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಫ್ಯಾಮಿಲಿ ಟ್ರಸ್ಟ್, ಶರಣಬಸವೇಶ್ವರ ಸಂಸ್ಥಾನ ಕಲಬುರಗಿ, ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ, ಅಖಿಲ ಭಾರತ ವೀರಶೈವ ಮಹಾಸಭೆ ಕಲಬುರಗಿ ಮತ್ತು ಜಿಲ್ಲಾ ವೀರಶೈವ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ರವಿವಾರದಂದು, ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಸ್ಮರಣಾರ್ಥ ಭವನದಲ್ಲಿ, ಶ್ರೀಮತಿ ಮತ್ತು ಶ್ರೀ ಸುಶಿಲಾಬಾಯಿ ಚನ್ನವೀರಪ್ಪ ಗುಡ್ಡಾ ದಂಪತಿಗಳಿಗೆ ಸಹಸ್ರ ಚಂದ್ರದರ್ಶನ ಕಾರ್ಯಕ್ರಮದಲ್ಲಿ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಮಹಾದಾಸೋಹಿ ಪೂಜ್ಯ ದಾಸೋಹಿ ಡಾ. ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್‍ರಾದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿಯವರು ಶಾಲು ಹೊದಿಸಿ ಫಲಪುಷ್ಷದೊಂದಿಗೆ ನೆನಪಿನ ಕಾಣೆಕೆ ನೀಡಿ ಸನ್ಮಾನಿಸಿದರು.

ಇದೇ ಸಂಧರ್ಭದಲ್ಲಿ ಸುಶಿಲಾಬಾಯಿ ಚನ್ನವೀರಪ್ಪ ಗುಡ್ಡಾ ದಂಪತಿಗಳ ಕುರಿತಾಗಿ “ಮೌನ ತಪಸ್ವಿ” ಎಂಬ ಕೃತಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಸದಾಶಿವ ಸ್ವಾಮಿಗಳು, ಸಂರಕ್ಷಕರಾದ ಶ್ರೀ ಬಸವರಾಜ ಪಾಟೀಲ ಸೇಡಂ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷರಾದ ಡಾ. ಶರಣಕುಮಾರ ಮೋದಿ, ಜಿಲ್ಲಾ ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷರಾದ ಅರುಣಕುಮಾರ ಪಾಟೀಲ, ಉಪಾಧ್ಯಕ್ಷರಾದ ಕಲ್ಯಾಣಪ್ಪ ಪಾಟೀಲ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.