ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸೂಚನೆ

ಮೈಸೂರು: ಮಾ.17:- ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು,ಕಳಪೆಗೆ ಅವಕಾಶ ಕೊಡದೆ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತಿ ಮಿನಿ ಮೀಟಿಂಗ್ ಹಾಲ್ ನಲ್ಲಿ ನಡೆದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರು ಸೇರಿದಂತೆ ಎಲ್ಲಾ ಸಹಾಯಕ ಮತ್ತು ಕಿರಿಯ ಇಂಜಿನಿಯರ್ ಗಳ ಸಭೆ ನಡೆಸಿ ಮಾತನಾಡಿದರು.
ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಮೊದಲ ಹಂತದಲ್ಲಿ 25 ಕೋಟಿ ರೂ ಮತ್ತು ಎರಡನೇ ಹಂತದಲ್ಲಿ 30 ಕೋಟಿ ರೂ ಮಂಜೂರಾಗಿ, ಎಲ್ಲಾ ಕಾಮಗಾರಿಗಳಿಗೆ ಈಗಾಗಲೇ ಪೂಜೆ ನೆರವೇರಿಸಲಾಗಿದೆ. ಎಲ್ಲಾ ಕಾಮಗಾರಿಗಳು ಪ್ರಾರಂಭವಾಗಿವೆ. ಆದರೆ ಕೆಲವೊಂದು ಗ್ರಾಮಗಳಲ್ಲಿ ಇನ್ನು ಸಹ ಕಾಮಗಾರಿ ಪ್ರಾರಂಭವಾಗಿಲ್ಲದೆ ಇರುವುದರಿಂದ ಕೂಡಲೇ ಕಾಮಗಾರಿ ಆರಂಭಿದಬೇಕು ಎಂದುಬಸೂಚಿಸಿದರು. ಚುನಾವಣೆ ಸನಿಹದಲ್ಲಿರುವ ಕಾರಣ ಸಮರೋಪಾದಿಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು. ಕ್ಷೇತ್ರದಲ್ಲಿನ 24 ದೇವಸ್ಥಾನಗಳ
ಜೀರ್ಣೋದ್ಧಾರಕ್ಕಾಗಿ 3 ಕೋಟಿ ರೂ.ಮಂಜೂರಾಗಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ಮಾಡುವಾಗ ಯಾವುದೇ ಕಳಪೆ ಆಗಬಾರದು.ಅಧಿಕಾರಿಗಳು ಪ್ರತಿಯೊಂದು ನಿಗಾವಹಿಸಬೇಕು.ಗುಣಮಟ್ಟದ ಕಾಮಗಾರಿ ಇರಬೇಕು ಎಂದರು.
ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಮಾತನಾಡಿ, ಇಂಜಿನಿಯರ್ ಗಳು ಕಾಮಗಾರಿಗಳು ನಡೆಯುವ ಸ್ಥಳದಲ್ಲಿ ಹಾಜರಿದ್ದು ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸುವಂತೆ ಸೂಚಿಸಿದರು. ಸಭೆಯಲ್ಲಿ ಇಇ ರಮೇಶ್,ಕೆಆರ್ ಡಿಎಲ್ ಕಾರ್ಯಪಾಲಕ ಅಭಿಯಂತರ ತಿಪ್ಪಾರೆಡ್ಡಿ,ಎಇಇ ಮಮತಾ,ಎಇ ಸುನಿಲ್ ಸೇರಿದಂತೆ ಇನ್ನಿತರರು ಹಾಜರಿದ್ದರು