ಗುಣಮಟ್ಟದ ಶಿಕ್ಷಣದಿಂದ ಸಮಾಜ ಸುಧಾರಣೆ ಸಾಧ್ಯ

ಗದಗ, ಸೆ.6:ಪ್ರತಿಯೊಬ್ಬರ ಜೀವನದಲ್ಲಿಯೂ ಗುರಿ ಮತ್ತು ಗುರು ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕøತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶ ಕಂಡ ಅತ್ಯಂತ ಶ್ರೇಷ್ಟ ರಾಷ್ಟ್ರಪತಿಗಳು, ತತ್ವಜ್ಞಾನಿಗಳು, ಮತ್ತು ಪ್ರಾಧ್ಯಾಪಕರಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತಿರುವುದು ಅರ್ಥಪೂರ್ಣ.
ರಾಧಾಕೃಷ್ಣನ್ ಅವರು ಶಿಕ್ಷಕರ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿಯನ್ನು ಹೊಂದಿದವರಾಗಿದ್ದರು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್‍ನಲ್ಲಿಯೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ರೈತರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತಂದು ಹಳ್ಳಿಹಳ್ಳಿಗಳಲ್ಲಿರುವ ಕೃಷಿಕರ ಮಕ್ಕಳು ಕೂಡ ಹೆಚ್ಚು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೆ ವಿಶೇಷ ಯೋಜನೆ ನೀಡಿದ್ದಾರೆ. ಅನೇಕ ಹಳ್ಳಿಗಳಲ್ಲಿ ಬಡತನದಲ್ಲಿರುವ ರೈತರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ನಡೆಸುತ್ತಿರುವ ಪರದಾಟವನ್ನು ತಪ್ಪಿಸಲು ಯೋಜನೆ ಸಹಕಾರಿಯಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸರ್ಕಾರದ ಜೊತೆಗೆ ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ವಿಶೇಷ ಕೊಡುಗೆ ನೀಡಿರುವುದನ್ನು ನಾವೆಲ್ಲ ಸ್ಮರಿಸಲೇಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು. ಹೊಸಹಳ್ಳಿ ಸಂಸ್ಥಾನಮಠದ ಅಭಿನವ ಬೂದೀಶ್ವರ ಮಹಾಸ್ವಾಮಿಗಳು ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್‍ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ದೇವರಾಜ್, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ರವಿ ಗುಂಜೀಕರ್ ಸೇರಿದಂತೆ ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.