ಗುಣಮಟ್ಟ ಶಿಕ್ಷಣದ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ

ಕೆ.ಆರ್.ಪೇಟೆ.ಮಾ.22:ತಾಲ್ಲೂಕಿನಲ್ಲಿ ಗುಣ ಮಟ್ಟದ ಶಿಕ್ಷಣದ ಅನುಷ್ಠಾನಕ್ಕೆ ಒತ್ತು ನೀಡ ಲಾಗಿದ್ದು ತಾಲ್ಲೂಕು ಶಿಕ್ಷಣಕಾಶಿಯಾಗಿ ಹೊರ ಹೊಮ್ಮಿದ್ದು ನರ್ಸರಿಯಿಂದ ಹಿಡಿದು ಇಂಜಿನಿ ಯರಿಂಗ್ ಸ್ನಾತಕೋತ್ತರ ಪದವಿ ವರೆಗೆ ವ್ಯಾಸಂಗ ಮಾಡಲು ಅವಕಾಶವಿದೆ. ಆದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳು ಶ್ರದ್ಧಾ ಭಕ್ತಿಯಿಂದ ವ್ಯಾಸಂಗ ಮಾಡಿ ಶ್ರೇಷ್ಠ ಸಾಧನೆ ಮಾಡಬೇಕು ಎಂದು ರಾಜ್ಯದ ಯುವ ಜನಸೇವೆ, ಕ್ರೀಡೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ.ನಾರಾಯಣಗೌಡ ಕರೆ ನೀಡಿದರು.
ಅವರು ತಾಲೂಕಿನ ಹೊಸಹೊಳಲು ಚಿಕ್ಕಕೆರೆ ಕೋಡಿಯ ಪಕ್ಕದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 3 ಕೋಟಿ 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವನ್ನು ಉದ್ಘಾಟಿಸಿ ಮಾತನಾಡಿದರು.
ತಾಲ್ಲೂಕಿನಲ್ಲಿ ಖಾಸಗಿ ಕಟ್ಟಡಗಳಲ್ಲಿ ನಡೆಯು ತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡವನ್ನು ನಿರ್ಮಿಸಲು ಸೂಕ್ತವಾದ ಜಾಗ ವನ್ನು ತಹಶೀಲ್ದಾರ್ ಶಿವಮೂರ್ತಿ ಅವರ ನೇತೃತ್ವದಲ್ಲಿ ಗುರುತಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿ ನಿಲಯಗಳಿಗೂ ಸ್ವಂತ ಕಟ್ಟಡವನ್ನು ಸರ್ಕಾರದ ವತಿಯಿಂದ ನಿರ್ಮಿಸಿ, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟು ಶೈಕ್ಷಣಿಕ ವಾತಾವರಣವನ್ನು ಒದಗಿಸಿಕೊಡಲಾಗುವುದು.ಆದ್ದರಿಂದ ವಿದ್ಯಾ ರ್ಥಿಗಳು ತಂದೆ- ತಾಯಿಗಳು ಹಾಗೂ ಗುರುಹಿರಿಯರ ಭಾವನೆಗಳಿಗೆ ಪೂರಕವಾಗಿ ಶ್ರದ್ಧೆಯಿಂದ ವ್ಯಾಸಂಗಮಾಡಿ ಗುರಿಮುಟ್ಟಲು ಪ್ರಯತ್ನಿಸಬೇಕು.
ನಿಮ್ಮ ನಿಮ್ಮ ಕೊಠಡಿಗಳು ಹಾಗೂ ವಸತಿ ನಿಲಯದ ವಾತಾವರಣವನ್ನು ಸ್ವಚ್ಛವಾಗಿ ಟ್ಟುಕೊಳ್ಳಬೇಕು ಎಂದು ಸಚಿವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಂ. ಶಿವಮೂರ್ತಿ, ಮಂಡ್ಯ ಮೂಡಾ ಅಧ್ಯಕ್ಷ ಕೆ.ಶ್ರೀ ನಿವಾಸ್, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗಾಯತ್ರಿ, ಜಿ.ಪಂ ಸದಸ್ಯರಾದ ರಾಮದಾಸ್, ಕೋಡಿಮಾರನಹಳ್ಳಿ ದೇವರಾಜು, ಜಿಪಂ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಪರಸಭಾ ಸದಸ್ಯ ಹೆಚ್.ಆರ್.ಲೋಕೇಶ್ ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ಸಚಿವರ ಆಪ್ತ ಸಹಾಯಕರಾದ ದಯಾನಂದ್, ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.