ಗುಣಮುಖರಾದವರಿಗೆ ಹೂಮಳೆ

ಹೊನ್ನಾಳಿ.ಜೂ.೭ : ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಕೋವಿಡ್ ಕೇರ್ ಸೆಂಟರ್‌ನಿಂದ ಇದೂವರೆಗೂ 1359 ಜನರು ಗುಣಮುಖರಾಗಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ಅರಬಗಟ್ಟೆ ಹಾಗೂ ಎಚ್.ಕಡದಕಟ್ಟೆಯಲ್ಲಿನ ಕೋವಿಡ್ ಕೇರ್ ಸೆಂಟರ್‌ನಿಂದ ಗುಣಮುಖರಾದ 70 ಜನ ಸೋಂಕಿತರಿಗೆ ಹೂಮಳೆ ಸುರಿಸಿ ಆತ್ಮೀಯವಾಗಿ ಬೀಳ್ಕೋಟ್ಟು ಸುದ್ದಿಗಾರರೊಂದಿಗೆ ಮಾತನಾಡಿದರು.ಅವಳಿ ತಾಲೂಕಿನಲ್ಲಿ ಒಟ್ಟು 3102 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 2021 ಜನರು ಕೊರೊನಾದಿಂದ ಮುಕ್ತರಾಗಿದ್ದು, ಇನ್ನು 967 ಸಕ್ರೀಯ ಪ್ರಕರಣಗಳು ಅವಳಿ ತಾಲೂಕಿನಲ್ಲಿವೆ ಎಂದರು. ನಗರ ಪ್ರದೇಶಗಳಿಗೆ ಹೋಲಿಸಿದರೆ ಅವಳಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಇದೀಗ ಗ್ರಾಮೀಣ ಭಾಗಗಳಲ್ಲೂ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿವೆ ಎಂದ ಶಾಸಕರು ಕೊರೊನಾ ಪ್ರಕರಣಗಳು ಕ್ಷೀಣಿಸುತ್ತಿವೆ ಎಂದು ಜನರು ಮೈಮರೆಯ ಬೇಡಿ ಕೊರೊನಾ ಬಗ್ಗೆ ಜಾಗೃತಿಯಿಂದ ಇರುವಂತೆ ಕಿವಿ ಮಾತು ಹೇಳಿದರು.ಕೊರೊನಾ ಸಂಕಷ್ಟದ ಕಾಲದಲ್ಲಿ ಜನರ ಜೊತೆ ನಿಲ್ಲ ಬೇಕಾಗಿದ್ದು ನನ್ನ ಕರ್ತವ್ಯ ಈ ಹಿನ್ನೆಲೆಯಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದ ಶಾಸಕರು, ಅವಳಿ ಅಧಿಕಾರ ಮುಖ್ಯವಲ್ಲಾ ಅವಳಿ ತಾಲೂಕಿನ ಜನರ ಆರೋಗ್ಯ ಮುಖ್ಯ ಈ ನನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದರು.ಚುನಾವಣೆ ಬಂದಾಗ ಜನರ ಮನೆ ಬಾಗಿಲಿಗೆ ಹೋಗಿ ಮತ ಕೇಳುವುದು ಆದರೇ ಇಂತಹ ಸಂಕಷ್ಟ ಕಾಲದಲ್ಲಿ ನಾನು ಮನೆ ಮಗನಾಗಿ, ಅವಳಿ ತಾಲೂಕಿನ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಅವಳಿ ತಾಲೂಕನ್ನು ಕೊರೊನಾ ಮುಕ್ತ ತಾಲೂಕು ಮಾಡ ಬೇಕೆಂದು ಪಣ ತೊಟ್ಟಿದ್ದೇನೆ ಎಂದರು.