ಗುಣಾಗ್ರಣಿ ಪ್ರಶಸ್ತಿ ಪ್ರದಾನ

ಕಲಬುರಗಿ,ಮೇ.24-ಹತ್ತನೇ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ” ಗುಣಾಗ್ರಣಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ಕನ್ನಡ ಭವನದ ಬಾಪುಗೌಡ ದರ್ಶನಾಪೂರ ರಂಗಮಂದಿರದಲ್ಲಿ ಇಂದು ಹಮ್ಮಿಕೊಂಡಿದ್ದ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಉದ್ಘಾಟಿಸಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಮ್ಮಾ ಢವಳಗಿ, ಎ.ಕೆ.ಆರ್.ದೇವಿ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಶಿವರಾಜ ಎಸ್.ಅಂಡಗಿ, ಯಶವಂತರಾಯ ಅಷ್ಠಗಿ, ಗೌರವ ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಮತ್ತವರ ಪಾಲಕರು ಸಮಾರಂಭದಲ್ಲಿ ಭಾಗವಹಿಸಿದ್ದರು.