ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಭ್ರಷ್ಟತೆಯಲ್ಲಿ ತೊಡಗಿದರೆ ಜೈಲಿಗೆ ಕಳಿಸುವುದು ಗ್ಯಾರಂಟಿ

ಸೇಡಂ, ಡಿ,30: ತಾಲೂಕಿನಲ್ಲಿ ಸುಮಾರು ಎರಡು ವರ್ಷಗಳಿಂದ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ (ಜಲ್ ಜೀವನ್ ಮಷೀನ್) ಮನೆ ಮನೆಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಕಾಮಗಾರಿ ನಿಧಾನ ಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದಾಗ ಸಚಿವರು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಫೆಬ್ರುವರಿ ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಸಚಿವರಾದ ಡಾ. ಶರಣಪ್ರಕಾಶ್ ಆರ್ ಪಾಟೀಲ್ ತಾಕಿದ್ದು ಮಾಡಿದರು.
ಪಟ್ಟಣದ ತಾಲೂಕು ಪಂಚಾಯಿತಿಯ ಸಂಭಾಂಗಣದಲ್ಲಿ ತಾಲೂಕು ಟಾಸ್ಕ್ ಫೆÇೀರ್ಸ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಟಣ ಸೇರಿದಂತೆ ಗ್ರಾಮಗಳಲ್ಲಿ ನೀರಿನ ಕೊರತೆ ಇರುವ ಸ್ಥಳಗಳಲ್ಲಿ ಹೊಸ ಬೋರ್ವೆಲ್ ಕೊರೆಸಿ, ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳು ಪಟ್ಟಣದಲ್ಲಿ ಕುಳಿತುಕೊಳ್ಳದೆ ಪ್ರತಿ ಗ್ರಾಮಗಳಿಗೆ ತೆರಳಿ ಅಲ್ಲಿರುವ ಮೂಲಭೂತ ಸೌಕರ್ಯಗಳ ಸಮಸ್ಯೆ ಅರಿತು ಪರಿಹಾರ ಕಲ್ಪಿಸುವಂತೆ ಪಿಡಿಒಗಳಿಗೆ ಸಚಿವರು ಸೂಚಿಸಿದರು. ಸಣ್ಣ ನೀರಾವರಿ ಇಲಾಖೆ, ಕೃಷಿ ಇಲಾಖೆ, ಪಶು ಆಸ್ಪತ್ರೆ, ಪಿಡಬ್ಲ್ಯೂಡಿ, ವಿದ್ಯುತ್ ಇಲಾಖೆ , ಸೇರಿದಂತೆ ಚಿಂಚೋಳಿ ತಾಲೂಕಿನ ಸೇಡಂ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಸಚಿವರು ಬಾಳಿಕೆ ಬರುವಂತಹ ಕಾಮಗಾರಿ ಮಾಡಿ, ಅಧರ್ಂಬರ್ಧ ಕೆಲಸ ಮಾಡುವ ಗುತ್ತಿಗೆದಾರರಿಗೆ ಪೇಮೆಂಟ್ ಮಾಡಬೇಡಿ ಎಂದು ಸಚಿವರು ಹೇಳಿದರು. ಪುರಸಭೆ ಮುಖ್ಯಾಧಿಕಾರಿ ಬಿ ಪ್ರಹ್ಲಾದವರು ಬಟಗೇರ.ಕೆ ಬಟಗೇರ.ಬಿ ಪುರಸಭೆ ವ್ಯಾಪ್ತಿಗೆ ಸೇರುವ ಕುರಿತು ಸಚಿವರ ಗಮನಕ್ಕೆ ತಂದರು, ಪುರಸಭೆ ವ್ಯಾಪ್ತಿಯಲ್ಲಿ ಬರುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ತಿಳಿಸಿದರು.

ಈ ವೇಳೆಯಲ್ಲಿ ಸಹಾಯಕ ಉಪ ವಿಭಾಗ ಆಯುಕ್ತರಾದ ಆಶಪ್ಪ ಪೂಜಾರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚನ್ನಪ್ಪ ರಾಯಣ್ಣವಾರ, ಚಿಂಚೋಳಿ ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ಇದ್ದರು. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಸರ್ಕಾರದ ಹಣ ಸರಿಯಾಗಿ ಸದುಪಯೋಗ ವಾಗುವಂತಾಗಲಿ, ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಭ್ರಷ್ಟತೆಯಲ್ಲಿ ತೊಡಗಿದರೆ ಕಾನೂನು ಪ್ರಕಾರ ತನಿಖೆ ಕೈಗೊಳ್ಳುವ ಮೂಲಕ ಭ್ರಷ್ಟಾಧಿಕಾರಿಗಳಿಗೆ ಜೈಲಿಗಟ್ಟುವುದು ಗ್ಯಾರಂಟಿ.
ಡಾ. ಶರಣಪ್ರಕಾಶ್ ಆರ್ ಪಾಟೀಲ್ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ
ಸಚಿವರು ಕರ್ನಾಟಕ ಸರ್ಕಾರ