ಗುತ್ತೂರು ಕೋವಿಡ್ ಕೇರ್ ಸೆಂಟರ್ ಗೆ ಶಾಸಕರ ಭೇಟಿ

ಹರಿಹರ.ಮೇ.೧೭;  ಗುತ್ತೂರು ಕೋವಿಡ್ ಕೇರ್ ಸೆಂಟರ್ ಗೆ ಹರಿಹರ ಶಾಸಕ ಎಸ್.ರಾಮಪ್ಪ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.ನಂತರ ಮಾತನಾಡಿದ ಅವರು ಕೋವಿಡ್ ರೋಗಿಗಳಿಗೆ  ಧೈರ್ಯದಿಂದ ರೋಗವನ್ನು ಎದುರಿಸಿಬೇಕು. ಕೋವಿಡ್ ಕೇಂದ್ರದ ಸಿಬ್ಬಂದಿ ಗಳಿಗೆ, ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಹಾಗೂ ಆರೈಕೆ ಮಾಡಲು ಸೂಚಿಸಲಾಗಿದೆ ಎಂದರು. ಯಾವುದೇ ಕುಂದುಕೊರತೆಗಳು ಅದಲ್ಲಿ ತಮ್ಮನ್ನು ಸಂಪರ್ಕ ಮಾಡಲು ತಿಳಿಸಿದರು ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಬಿ.ರಾಮಚಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿ ಮುಹಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ಅಬಿದ್ ಅಲಿ ಇದ್ದರು.