ಗುಪ್ತಚರ, ರಾ ಮುಖ್ಯಸ್ಥ ರ ಅವಧಿ ಒಂದು ವರ್ಷ ವಿಸ್ತರಣೆ

ನವದೆಹಲಿ, ಮೇ.27- ದೇಶದ ಗುಪ್ತಚರ ವಿಭಾಗದ ಮುಖ್ಯಸ್ಥ ಮತ್ತು ರಾ ವಿಭಾಗದ ಮುಖ್ಯಸ್ಥರ ಅಧಿಕಾರ ಅವಧಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡಿದ್ದಾರೆ.

ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ – ರಾ ಕಾರ್ಯದರ್ಶಿ ಸಮಂತ್ ಕುಮಾರ್ ಗೋಯಲ್ ಹಾಗೂ ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ್ ಕುಮಾರ್ ಅವರ ಅಧಿಕಾರ ಅವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಿದ್ದಾರೆ.

1984 ತಂಡದ ಐಪಿಎಸ್ ಅಧಿಕಾರಿಗಳಾಗಿರುವ ಪಂಜಾಬ್, ಅಸ್ಸಾಂ ಮತ್ತು ಮೇಘಾಲಯ ಕೇಡರ್ ಅಧಿಕಾರಿಗಳ ಅವಧಿಯನ್ನು 2022ರ ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ.

ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ದಕ್ಷತೆ ಮತ್ತು ಸೇವಾ ನಿಷ್ಠೆಯನ್ನು ಪರಿಗಣಿಸಿ ಅಧಿಕಾರವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್- ರಾ ಕಾರ್ಯದರ್ಶಿಯಾಗಿ ಸಮಂತ್ ಕುಮಾರ್ ಗೋಯಲ್ ಅವರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಅದೇ ರೀತಿ ಗುಪ್ತಚರ ಇಲಾಖೆ ನಿರ್ದೇಶಕರಾಗಿ ಅರವಿಂದ್ ಕುಮಾರ್ ಸೇವೆ ಗಮನಾರ್ಹ ಸೇವೆ ಹಿನ್ನೆಲೆಯಲ್ಲಿ ಅವರ ಸೇವಾ ಅವಧಿಯನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿ ಇರುವ ಇಲಾಖೆ ಅಡಿಯಲ್ಲಿ ಬರುವ ಹಿನ್ನೆಲೆಯಲ್ಲಿ ಅವರ ಅಧಿಕಾರವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಲಾಗಿದೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವೆಲ್ ಅವರೊಂದಿಗೆ ಚರ್ಚೆ ನಡೆಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ