ಗುರುತಿನ ಚೀಟಿ ವಿತರಣೆ

ಧಾರವಾಡ, ನ.24: 74-ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ರಾಯಾಪುರದಲ್ಲಿರುವ ಜಿಲ್ಲಾ ನಿರಾಶ್ರಿತರ ಕೇಂದ್ರದಲ್ಲಿ ಇರುವ ನಿರಾಶ್ರಿತರಿಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ಹಾಗೂ ಜಿಲ್ಲಾಧಿಕಾರಿಗಳ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಸೂಕ್ತ ನಿರ್ದೇಶನದನ್ವಯ ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರ ಪಾಲ್ಗೊಳ್ಳುವಿಕೆ ಕುರಿತಂತೆ ಶಿಬಿರವಾಸಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ನಿರಾಶ್ರಿತರ ಕೇಂದ್ರದಲ್ಲಿರುವ ಅನಾಥರು, ಭಿಕ್ಷುಕರು, ಹಾಗೂ ನಿರಾಶ್ರಿತರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಮೂಲಕ ಮತದಾರರ ಗುರುತಿನ ಚೀಟಿಗಳನ್ನು ಎಲ್ಲರ ಸಮ್ಮುಖದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಿರಾಶ್ರಿತರ ಕೇಂದ್ರದ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ, ವಲಯ ಕಚೇರಿಯ ಸಹಾಯಕ ಆಯುಕ್ತ ಶಂಕರ ಪಾಟೀಲ, 74-ಪಶ್ಚಿಮ ವಿಧಾನ ಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿ ಉಮೇಶ್ ಎಸ್. ಸವಣೂರ ಹಾಗೂ ಮೇಲ್ವಿಚಾರಕಿ ಶಾರದಾ ಅಂಗಡಿ, ಮತಗಟ್ಟೆ ಮಟ್ಟದ ಅಧಿಕಾರಿ ಮತ್ತು ನಿರಾಶ್ರಿತರ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.