ಗುರುಪಾದಪ್ಪ ನಾಗಮಾರಪಳ್ಳಿ ಚಿತ್ರ ಹೊರ ಬರಲಿ

ಬೀದರ್:ನ.12: ದಿ. ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರ ಜೀವನ ಚರಿತ್ರೆ ಆಧಾರಿತ ಚಲನಚಿತ್ರ ಹೊರ ಬರಬೇಕು ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರೂ ಆದ ಬ್ರಹ್ಮರ್ಷಿ ಆನಂದ ಸಿದ್ಧಿ ಪೀಠದ ಸಂಸ್ಥಾಪಕ ಆನಂದ ಗುರೂಜಿ ಆಶಯ ವ್ಯಕ್ತಪಡಿಸಿದರು.
ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರ ಜನ್ಮದಿನದ ಅಂಗವಾಗಿ ಇಲ್ಲಿಯ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಸಹಾಯ ಗುಂಪುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಗಮಾರಪಳ್ಳಿ ಅವರ ಕುರಿತು ಈಗಾಗಲೇ ಕಿರುಚಿತ್ರ ನಿರ್ಮಾಣಗೊಂಡಿದೆ. ದೊಡ್ಡ ಪರದೆಯ ಚಿತ್ರ ತಯಾರಾದರೆ ಎಲ್ಲರೂ ಅವರ ಜೀವನ ಹಾಗೂ ಸಾಧನೆಗಳನ್ನು ಅರಿಯಲು ಸಾಧ್ಯವಾಗಲಿದೆ ಎಂದು ಹೇಳಿದರು.
ಸ್ವಸಹಾಯ ಗುಂಪುಗಳ ರಚನೆ ಮೂಲಕ ನಾಗಮಾರಪಳ್ಳಿ ಅವರು ಮಹಿಳಾ ಸಬಲೀಕರಣಕ್ಕೆ ಶ್ರಮಿಸಿದ್ದರು. ಗುಂಪಿನ ಸದಸ್ಯೆಯರಿಗೆ ಆಗಿನ ಸಂದರ್ಭದಲ್ಲೇ ಡಿಸಿಸಿ ಬ್ಯಾಂ???ನಿಂದ ರೂ. 25 ಸಾವಿರ ವರೆಗೆ ಸಾಲ ಕೊಟ್ಟಿದ್ದರು. ಈಗ ರೂ. 2 ಲಕ್ಷ ದವರೆಗೂ ಸಾಲ ನೀಡುತ್ತಿರುವುದು ಪ್ರಶಂಸನೀಯ ಎಂದರು.
ಹಿಂದೆ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದಾಗ ನಾಗಮಾರಪಳ್ಳಿ ಅವರು ಅಭಿಮಾನಿಗಳೇ ನನ್ನ ನಿಜವಾದ ಸಂಪತ್ತು ಎಂದು ಹೇಳಿದ್ದರು. ಅವರ ಪುತ್ರರಾದ ಉಮಾಕಾಂತ ನಾಗಮಾರಪಳ್ಳಿ ಹಾಗೂ ಸೂರ್ಯಕಾಂತ ನಾಗಮಾರಪಳ್ಳಿ ಅವರೂ ತಂದೆಯ ದಾರಿಯಲ್ಲೇ ಸಾಗುತ್ತಿದ್ದಾರೆ. ಸಂಘ ಸಂಸ್ಥೆಗಳ ಮೂಲಕ ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ನಾನು ಆರು ವರ್ಷಗಳ ಹಿಂದೆ ಬ್ಯಾಂ???ನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ ಬ್ಯಾಂಕ್ ಉತ್ತಮ ಸ್ಥಿತಿಯಲ್ಲಿತ್ತು. ಈಗ ಅದಕ್ಕೂ ಉತ್ತಮ ಸ್ಥಿತಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಸಹಾಯ ಗುಂಪು ತಮ್ಮ ಬದುಕು ಕಟ್ಟಿಕೊಳ್ಳಲು ಹೇಗೆ ನೆರವಾಯಿತು ಎನ್ನುವ ಕುರಿತು ಗುಂಪಿನ ಸದಸ್ಯೆಯರಾದ ನಾಗಮ್ಮ ಶಂಕರ ಹಾಗೂ ಭಾರತಿ ಅಷ್ಟೂರ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಕಲಾವಿದ ಶಂಕರ ಚೊಂಡಿ ಹಾಗೂ ತಂಡದವರು ಜಾನಪದ ಗೀತೆ ಹಾಡಿದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರ ಕುರಿತ ಕಿರುಚಿತ್ರ ಪ್ರದರ್ಶಿಸಲಾಯಿತು. ಸಾಹಿತಿ ಎಂ.ಜಿ. ದೇಶಪಾಂಡೆ ರಚಿತ ದಿ. ನಾಗಮಾರಪಳ್ಳಿ ಅವರ ಜೀವನದ ಮೇಲೆ ಬೆಳಕು ಚೆಲ್ಲುವ ಸಹಕಾರ ಭೀಷ್ಮ ಕೃತಿ ಬಿಡುಗಡೆ ಮಾಡಲಾಯಿತು.
ಮಾತೆ ಜಯಲಕ್ಷ್ಮಿ, ಶ್ರೀನಿವಾಸ ಗುರೂಜಿ, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಎನ್.ಎಸ್.ಎಸ್.ಕೆ. ಅಧ್ಯಕ್ಷ ಡಿ.ಕೆ. ಸಿದ್ರಾಮ, ಉದ್ಯಮಿ ಮಹೇಶ ತಾಳಂಪಳ್ಳಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ. ಕೈಲಾಶ ಪಾಟೀಲ, ಡಾ. ರಜನೀಶ್ ವಾಲಿ, ವಂದೇ ಮಾತರಂ ಇಂಟ???ನ್ಯಾಷನಲ್ ಸ್ಕೂಲ್ ಕಾರ್ಯದರ್ಶಿ ರತ್ನಾ ಪಾಟೀಲ, ಸಹಕಾರ ಸಂಘಗಳ ಉಪ ನಿಬಂಧಕಿ ಮಂಜುಳಾ ಎಸ್, ಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಮಹಾಜನ ಮಲ್ಲಿಕಾರ್ಜುನ, ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಯಡಮಲ್ಲೆ ಮತ್ತಿತರರು ಇದ್ದರು.
ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಸ್ವಾಗತಿಸಿದರು. ಉಮಾದೇವಿ ಚಿಲ್ಲರ್ಗೆ ನಿರೂಪಿಸಿದರು