ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗೆ ವಿಶೇಷ ಪೂಜೆ

ಸಂಜೆವಾಣಿ ವಾರ್ತೆ

 ಹಿರಿಯೂರು ಜುಲೈ 4-  ನಗರದ ಸುಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಗುರುಪೂರ್ಣಿಮೆ ಯ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ವಾಮಿಗೆ ಪಂಚಾಮೃತ ಅಭಿಷೇಕ ಪುಷ್ಪಾರ್ಚನೆ, ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಶ್ರೀ ರಾಘವೇಂದ್ರ ಸ್ವಾಮಿಗಳನ್ನು ವಿವಿಧ ಘಮಘಮಿಸುವ ಹೂವುಗಳಿಂದ ಅಲಂಕರಿಸಿದ್ದು ವಿಶೇಷವಾಗಿತ್ತು. ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ  ನಡೆಯಿತು. ದೇವಸ್ಥಾನದ ಅರ್ಚಕರಾದ ಮಂಜುನಾಥಚಾರ್ಯ ಮತ್ತು ಮಕ್ಕಳು ಪೂಜಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದರು. ಮುಂಜಾನೆಯಿಂದ ಸಂಜೆಯವರೆಗೂ ನಗರದ ಅನೇಕ ಭಕ್ತರು ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.