ಗುರುವಂದನಾ ಮಹೋತ್ಸವ: ಪ್ರಶಸ್ತಿ ಪ್ರದಾನ, ಸನ್ಮಾನ

ಕಲಬುರಗಿ,ಏ.1-ಜಿಲ್ಲಾ ವೀರಶೈವ ಸಮಾಜ ಹಾಗೂ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಡಾ.ಶಿವಕುಮಾರ ಶಿವಯೋಗಿಗಳ 116ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿಂದು ಆಚರಿಸಲಾಯಿತು.
ಇದೇ ವೇಳೆ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸನ್ ಮಾತೋಶ್ರೀ ದಾಕ್ಷಾಯಿಣಿ ಅಪ್ಪ ಅವರಿಗೆ ಶ್ರೀ ಸಿದ್ಧಗಂಗಾ ಶ್ರೀ ಪ್ರಶಸ್ತಿ, ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕಿ ಡಾ.ಕವಿತಾ ಪಾಟೀಲ ಅವರಿಗೆ ಶ್ರೀ ಶಿವಕುಮಾರ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಲ್ಲದೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ದೇವಿಂದ್ರಪ್ಪ ಅವಂಟಿ, ಹಣಮಂತರಾವ ಭೈರಾಮಡಗಿ, ಬಾಬುರಾವ ಯಡ್ರಾಮಿ, ಶರಣಯ್ಯ ಹಿರೇಮಠ, ಶಿವರಾಯ ದೊಡ್ಡಮನಿ, ನಜೀರ್ ಮಿಯಾ ಹಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ ಪುರಸ್ಕøತರಾದ ಜಯತೀರ್ಥ ಪಾಟೀಲ, ಪ್ರವೀಣ್ ಪಾರಾ, ಮಂಜುನಾಥ ಜೂಟಿ, ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಶಶಿಕಾಂತ ಪಾಟೀಲ ಹಾಗೂ ಸಂಸ್ಥೆಯ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಶ್ರೀಶೈಲಂ ಸಾರಂಗ ಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯವಹಿಸಿದ್ದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಡಾ.ದಯಾನಂದ ಅಗಸರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜಿಲ್ಲಾ ವೀರಶೈವ ಸಮಾಜ ಹಾಗೂ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಅಧ್ಯಕ್ಷ ಅರುಣಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕಾರ್ಯದರ್ಶಿ ಶ್ರೀಶೈಲ ಘೂಳಿ, ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ, ಖಜಾಂಚಿ ಚನ್ನಬಸಯ್ಯ ಗುರುವಿನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.