ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ಸುಳ್ಯ, ನ.೧೫-ಕನಕದಾಸ ಮಕ್ಕಳ ಭಜನಾ ಮಂಡಳಿ, ಕನಕಮಜಲು ಇದರ ಪ್ರಥಮ ವರ್ಷದ ವಾರ್ಷಿಕ ಸಂಭ್ರಮದ ಪ್ರಯುಕ್ತ ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ ಸಹಕಾರದಲ್ಲಿ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರಾಮಕೃಷ್ಣ ಕಾಟುಕುಕ್ಕೆ ಅಧ್ಯಕ್ಷತೆವಹಿಸಿ ಗುರುವಂದನೆ ಸ್ವೀಕರಿಸಿ ಆಶೀರ್ವಚನ ನೀಡಿದರು ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ತಾಲೂಕು ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್, ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ಮಾಪಕಿ  ಪದ್ಮಶ್ರೀ ಭಟ್, ಆತ್ಮಾರಾಮ ಭಜನಾ ಮಂದಿರದ ಮಾಜಿ ಅಧ್ಯಕ್ಷ ಜಗನ್ನಾಥ ಕಾಪಿಲ, ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ಹರ್ಷಾ ಕರುಣಾಕರ, ಕನಕದಾಸ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷೆ ಕು. ಆಕಾಂಕ್ಷಾ ಉಪಸ್ಥಿತರಿದ್ದರು.