ಗುರುವನ್ನು ಗೌರವಿಸುವ ದಿನ ಶಿಕ್ಷಕರ ದಿನವಾಗಿದೆ:ದಂಡಿಗಿಮಠ

ಸೈದಾಪುರ:ಸೆ.6:ಜ್ಞಾನವನ್ನು ಧಾರೆ ಎರೆದು ಪ್ರತಿಯೊಬ್ಬರ ಯಶಸ್ಸಿನ ಜೀವನದ ಏಳಿಗೆಗೆ ಕಾರಣರಾದ ಗುರು ವೃಂದವನ್ನು ನೆನಪಿಸಿ ಗೌರವಿಸುವ ದಿನವೇ ಶಿಕ್ಷಕರ ದಿನವಾಗಿದೆ ಎಂದು ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ ಅಭಿಪ್ರಾಯಪಟ್ಟರು.

ಇಲ್ಲಿನ ವಿದ್ಯಾ ವರ್ಧಕ ಡಿ.ಎಲ್.ಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳ ವತಿಯಿಂದ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ ಅವರು ತಮ್ಮ ಜನ್ಮ ದಿನವನ್ನು ಶಿಕ್ಷಕ ದಿನವನ್ನಾಗಿ ಆಚರಣೆ ಮಾಡುವಂತೆ ಹೇಳಿ ಶಿಕ್ಷಕ ಸಮೂದಾಯವನ್ನು ಗೌರವಿಸುವಂತೆ ಮಾಡಿದ್ದಾರೆ. ಇದರ ಮಹತ್ವ ಹೆಚ್ಚಾಗುವಂತೆ ಮಾಡಲು ಶಿಕ್ಷಕರು ಸಮರ್ಪಣಾ ಭಾವನೆಯೊಂದಿಗೆ ಕೆಲಸ ಮಾಡಬೇಕು. ಶಿಕ್ಷಕ ವೃತ್ತಿ ಶ್ರೇಷ್ಠವಾದದು. ಸಮಾಜದ ಉತ್ತಮ ಸಂಪನ್ಮೂಲವಾಗಿ ನಮ್ಮನ್ನು ಗುರುತಿಸಿಕೊಳ್ಳಬೇಕು ಎಂದು ಹೇಳಿದರು. ಪ್ರಶಿಕ್ಷಣಾರ್ಥಿಗಳು ಉಪನ್ಯಾಸಕರಿಗಾಗಿ ವಿವಿಧ ಸ್ಪರ್ಧೇಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

ಉಪನ್ಯಾಸಕರಾದ ಸಾಬಯ್ಯ ರಾಯಪ್ಪನೋರ, ಹಣಮರೆಡ್ಡಿ ಮೋಟ್ನಳ್ಳಿ, ಶ್ವೇತಾ ರಾಘವೇಂದ್ರ ಪೂರಿ, ಆನಂದ ಪಾಟೀಲ ಕೊಂಡಾಪುರ ಸೇರಿದಂತೆ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.