ಗುರು, ಹಿರಿಯರ ಗೌರವಿಸಿ

ಬೀದರ್:ಡಿ.3: ಮಕ್ಕಳು ತಂದೆ-ತಾಯಿ, ಗುರು ಹಾಗೂ ಹಿರಿಯರನ್ನು ಗೌರವಿಸಬೇಕು ಎಂದು ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಬಿ. ಜಾನಕನೋರ ಹೇಳಿದರು.
ತಾಲ್ಲೂಕಿನ ಚಿಟ್ಟಾವಾಡಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ಸದ್ಗುಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ಪ್ರಜೆಯಾಗಲು ಪ್ರಯತ್ನಿಸಬೇಕು ಎಂದರು.
ಸಾಂಸ್ಕøತಿಕ ಕಾರ್ಯಕ್ರಮಗ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಾಚಾರ್ಯ ಸುರೇಶ ಮಮಡೇಕರ್, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು