ಗುವಿವಿಯಲ್ಲಿ ಹುತಾತ್ಮ ದಿನ ಆಚರಣೆ

ಕಲಬುರಗಿ:ಜ.30: ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಜ್ಞಾಪಕಾರ್ಥವಾಗಿ ಹುತಾತ್ಮರ ದಿನಾಚರಣೆಯನ್ನು ಅಚರಿಸಲಾಯಿತು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಮಾತನಾಡಿ ಭಾರತ ಸ್ವಾತಂತ್ರ್ಯ ಪಡೆಯಲು ಹಲವು ನಾಯಕರು ತ್ಯಾಗ ಮಾಡಿದ್ದಾರೆ. ಶ್ರೇಷ್ಠ ಪ್ರಜಾತಾಂತ್ರಿಕ ವ್ಯವಸ್ಥೆ ಹೊಂದಿರುವ ದೇಶ ಇಷ್ಟು ಶಾಂತಿ ಮತ್ತು ನೆಮ್ಮದಿ ಕಾಣಲು ಸಾಧ್ಯವಾಗಿದೆ. ಸಾಮರಸ್ಯದ ಜೀವನ ಸರ್ವರಿಗೂ ಸಿಗುತ್ತಿದೆ ಎಂದರು.ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ನಾಯಕರಿಗೆ ಗೌರವಸೂಚಿ ಮೌನಚಾರಣೆ ಮಾಡಲಾಯಿತು.

ಕುಲಸಚಿವ ಡಾ. ಬಿ. ಶರಣಪ್ಪ, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ. ಕೆ. ಲಿಂಗಪ್ಪ, ಐಕ್ಯೂಎಸಿ ನಿರ್ದೇಶಕ ಪ್ರೊ. ಕೆರೂರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್. ಜಿ. ಕಣ್ಣೂರು ಉಪಸ್ಥಿತರಿದ್ದರು. ವಿವಿಧ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ವಿಭಾಗಗಳ ಪ್ರಾಧ್ಯಾಪಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು.