ಗುವಿವಿ ಅತಿಥಿ ಉಪನ್ಯಾಸಕರಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಕಲಬುರಗಿ,ಜೂ.08: ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಗುವಿವಿ ದಲ್ಲಿ ನೂರಾರು ವಿದ್ಯಾರ್ಥಿನಿಯರು ಹೆಚ್ಚಿನ ಜ್ಞಾನಾರ್ಜನೆಗಾಗಿ, ಹಲವಾರು ಕಡೆಗಳಿಂದ ವಿಶ್ವವಿದ್ಯಾಲಯಕ್ಕೆ ಓದಲು ಬರುತ್ತಾರೆ. ಅದರಲ್ಲೂ ವಿದ್ಯಾರ್ಥಿನಿಯರು ಸಮಾಜದ ಎಲ್ಲಾ ಅಡೆತಡೆಗಳನ್ನು ದಾಟಿ ಹಲವಾರು ಕನಸುಗಳನ್ನು ಕಟ್ಟಿಕೊಂಡು ಬರುತ್ತಾರೆ. ಇಂತಹ ವಿದ್ಯಾರ್ಥಿನಿಯರಿಗೆ ಜ್ಞಾನ ನೀಡಿ ದಾರಿದೀಪವಾಗಬೇಕಾದ ಉಪನ್ಯಾಸಕರು ಇಂತಹ ಕೃತ್ಯಗಳಲ್ಲಿ ತೋಡಗಿರುವುದನ್ನು ಎಐಡಿಎಸ್ ಓ ಜಿಲ್ಲಾ ಸಮಿತಿಯು ಅತ್ಯುಗ್ರವಾಗಿ ಖಂಡಿಸುತ್ತದೆ

ಜ್ಞಾನ ಕೊಡುವ ಶಿಕ್ಷಕರೇ ಇಂತಹ ಘಟನೆಗಳಲ್ಲಿ ತೊಡಗುತ್ತಿರುವುದು ವಿದ್ಯಾರ್ಥಿನಿಯರಲ್ಲಿ ಆತಂಕವನ್ನು ಮನೆಮಾಡಿದೆ. ಈ ಘಟನೆಯ ಬಗ್ಗೆ ಕೂಡಲೇ ನಿಷ್ಪಕ್ಷಪಾತವಾದ ತನಿಖೆ ನಡೆಸಿ ಅಪರಾದಿಗಳಿಗೆ ಶಿಕ್ಷೆ ನೀಡಬೇಕು ಮತ್ತು ಎಲ್ಲಾ ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆಯನ್ನು ಖಾತ್ರಿಪಡಿಸಬೇಕಾಗಿ ಎಐಡಿಎಸ್ ಓ ಜಿಲ್ಲಾ ಸಮಿತಿಯು ಈ ಮೂಲಕ ಆಗ್ರಹಿಸುತ್ತದೆ ಎಂದು ತುಳಜರಾಮ ಎನ್.ಕೆ ಜಿಲ್ಲಾ ಕಾರ್ಯದರ್ಶಿ ಎಐಡಿಎಸ್ ಓ ಕಲಬುರಗಿ ತಿಳಿಸಿದ್ದಾರೆ.