ಗು.ವಿ.ವಿ.ಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತ್ಯೋತ್ಸವ ಕಾರ್ಯಕ್ರಮ

ಕಲಬುರಗಿ.ಏ.17: ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಸಂಸ್ಥೆ ವತಿಯಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಏ.20 ರಂದು ಬೆಳಿಗ್ಗೆ 11 ಗಂಟೆಗೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕಲಪತಿಗಳಾದ ಪೆÇ್ರ. ಮಲ್ಲಿಕಾ ಘಂಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡುವವರು. ಗುಲಬರ್ಗಾ ವಿಶ್ವವಿದ್ಯಾಲಯದ ಕಲಪತಿ ಪೆÇ್ರ. ದಯಾನಂದ ಅಗಸರ ಅವರು ಅಧ್ಯಕ್ಷತೆ ವಹಿಸುವರು. ಸಿಂಡಿಕೇಟ್ ಸದಸ್ಯ ಪೆÇ್ರ. ಪಿ.ವ್ಹಿ. ಹುನಗುಂದ, ವಿದ್ಯಾವಿಷಯಕ ಪರಿಷತ್ ಸದಸ್ಯ ಪೆÇ್ರ. ಬಾಬಣ್ಣ ಹೂವಿನಭಾವಿ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಸಂಸ್ಥೆಯ ನಿರ್ದೇಶಕ ಪೆÇ್ರ.ಚಂದ್ರಕಾಂತ ಯಾತನೂರ ಹಾಗೂ ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.