ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಅಫಜಲಪೂರ :ಆ.31: ತಾಲೂಕಿನ ದೇ. ಕಲ್ಲೂರ ಗ್ರಾಂ.ಪಂ. ವತಿಯಿಂದ ಗ್ರಾಮದ ಶ್ರೀ ಸಿದ್ದರಾಮೇಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ಗೃಹಲಕ್ಷ್ಮಿ ಯೋಜನಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾಂ.ಪಂ. ಅಧ್ಯಕ್ಷೆ ಸುಮಂಗಲ ಸಿಂದಗೇರಿ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪೂರಕವಾಗುವಂತೆ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿರುವುದು ಅತ್ಯಂತ ಸಂತೊಷದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್. ವೈ.ಪಾಟೀಲ್, ಗ್ರಾಂ.ಪಂ. ಉಪಾಧ್ಯಕ್ಷೆ ಲಘಮವ್ವ ಅಂಡಗಿ, ಸರ್ವ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಗುರು ಹಿರಿಯರು, ಪ್ರಮುಖರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಗ್ರಾಂ.ಪಂ. ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಯಾಡಗಿ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.