
(ಸಂಜೆವಾಣಿ ವಾರ್ತೆ)
ಔರಾದ : ಆ.31:ರಾಜ್ಯ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಿನ್ನೆ ಉದ್ಘಾಟನೆಗೊಂಡಿದ್ದು ತಾಲೂಕಿನ 21 ಗ್ರಾಮ ಪಂಚಾಯಿತಿ ಹಾಗೂ ಔರಾದ ಪಟ್ಟಣದಲ್ಲಿ ಸಾವಿರಾರು ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯ ನೇರ ಪ್ರಸಾರ ವೀಕ್ಷಣೆ ಮಾಡಿದರು.
ತಾಲೂಕಿನ 21 ಗ್ರಾಮ ಪಂಚಾಯಿತಿ ಹಾಗೂ ಪಟ್ಟಣದ ಪಟ್ಟಣ ಪಂಚಾಯಿತಿ, ಕನಕ ಭವನ, ಅಮರೇಶ್ವರ ದೇಗುಲ ಸೇರಿದಂತೆ ವಿವಿಧ ಕಡೆ ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭದ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು, ತಹಸೀಲ್ದಾರ ಮಲಶೆಟ್ಟಿ ಚಿದ್ರೆ ಅವರು ನೇರ ಪ್ರಸಾರ ವೀಕ್ಷಣೆಗೆ ಚಾಲನೆ ನೀಡಿದರು. ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯ ನೇರ ಪ್ರಸಾರ ವೀಕ್ಷಣೆ ಮಾಡಿ ಯೋಜನೆಯ ಮಾಹಿತಿ ಪಡೆದರು.