ಗೃಹಲಕ್ಷ್ಮಿ ಯೋಜನೆ-ಸಿದ್ಧತೆಗಳ ಪರಿಶೀಲನೆ

ಕೋಲಾರ, ಆ,೨೪-ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯದ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ ೩೦ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಉದ್ಘಾಟಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿಗಳಲ್ಲಿ ಯಶಸ್ವಿಯಾಗಿ ಅನುಷನ ಮಾಡುವ ಬಗ್ಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳನ್ನಾಗಿ ಹಾಗೂ ರಾಜ್ಯದ ಎಲ್ಲಾ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಆಯ ತಾಲೂಕಿನ ನೋಡಲು ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಈ ಯೋಜನೆಯ ಸಮರ್ಪಕ ಅನುಷನದ ಕುರಿತು ಹಾಗೂ ಉದ್ಘಾಟನಾ ದಿನದ ಸಮಾರಂಭವನ್ನು ಆಯೋಜಿಸುವ ಬಗ್ಗೆ ಪೂರ್ವ ಸಿದ್ಧತಾ ಸಭೆಯುಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಲ್ಲಾ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯಿತಿವಾರು ನೂಡಲ್ ಅಧಿಕಾರಿಗಳು, ಜಿಲ್ಲಾ ಯೋನಜನ ವ್ಯವಸ್ಥಾಪಕರು ಸೇರಿದಂತೆ ಮತ್ತಿತರರು ಹಾಜರಿದ್ದರು.